SP Balasubrahmanyam: ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಇಂದು ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರು ಭಾರತದ 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡು ಹಾಡುವ ಮೂಲಕ ಗಿನ್ನೆಸ್ ದಾಖಲೆ ಮಾಡಿದ್ದಾರೆ. ತುಂಬ ಮಂದಿ ಸ್ಟಾರ್ಗಳಿಗೆ ಬಾಲಸುಬ್ರಹ್ಮಣ್ಯಂ ಅವರು ಡಬ್ಬಿಂಗ್ ಮಾಡಿದ್ದಾರೆ. 70ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 1979, 1981,1983,1988, 1995,1996ಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. 2001ರಲ್ಲಿ ಪದ್ಮಶ್ರೀ ಹಾಗೂ 2011ರಲ್ಲಿ ಪದ್ಮಭೂಷಣ ಪ್ರಶಸ್ತಿ ಬಾಲಸುಬ್ರಹ್ಮಣ್ಯಂ ಅವರಿಗೆ ನೀಡಿ ಗೌರವಿಸಲಾಗಿತ್ತು. ಸ್ಯಾಂಡಲ್ವುಡ್ನ ಸಂಯೋಜಕ ಉಪೇಂದ್ರ ಕುಮಾರ್ ಅವರಿಗಾಗಿ 12 ಗಂಟೆಗಳಲ್ಲಿ 21 ಹಾಡು ಹಾಡಿ ದಾಖಲೆ ಮಾಡಿದ್ದಾರೆ ಎಸ್ಪಿಬಿ.