ಮಾನನಷ್ಟ ಮೊಕದ್ದಮೆಯಲ್ಲಿ ಜೈಲು ಶಿಕ್ಷೆಯೊಂದಿಗೆ ಲೋಕಸಭೆಯಲ್ಲೂ ಅನರ್ಹತೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.
ಮಾನನಷ್ಟ ಮೊಕದ್ದಮೆಯಲ್ಲಿ ಜೈಲು ಶಿಕ್ಷೆಯೊಂದಿಗೆ ಲೋಕಸಭೆಯಲ್ಲೂ ಅನರ್ಹತೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕನಿಗೆ ಜಾಮೀನು ಲಭಿಸಿದೆ.
2/ 7
ಮೋದಿ ಸರ್ನೇಮ್ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು.
3/ 7
ನಂತರ ರಾಹುಲ್ ಗಾಂಧಿ ತಮಗೆ ವಿಧಿಸಿರುವ ಶಿಕ್ಷೆಯನ್ನು ರದ್ದುಗೊಳಿಸುವಂತೆ ಸೂರತ್ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಇಂದು ವಿಚಾರಣೆ ನಡೆಸಿತು.
4/ 7
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ನೀಡಲಾಗಿರುವ ಜಾಮೀನನ್ನು ಏಪ್ರಿಲ್ 13ಕ್ಕೆ ವಿಸ್ತರಿಸಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಏಪ್ರಿಲ್ 13ರಂದು ಜಾಮೀನು ವಿಸ್ತರಣೆ ಕುರಿತು ವಿಚಾರಣೆ ನಡೆಯಲಿದೆ. ಇನ್ನೂ ಶಿಕ್ಷೆ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮೇ 3ರಂದು ನಡೆಯಲಿದೆ ಎಂದು ರಾಹುಲ್ ಪರ ವಕೀಲ ತಿಳಿಸಿದ್ದಾರೆ.
5/ 7
ಮೇ 3 ರಂದು ರಾಹುಲ್ ಗಾಂಧಿ ಅವರ 2 ವರ್ಷದ ಜೈಲು ಶಿಕ್ಷೆಯನ್ನು ತಡೆ ಹಿಡಿದರೆ, ಕಾಂಗ್ರೆಸ್ ನಾಯಕನ ಲೋಕಸಭಾ ಸದಸ್ಯತ್ವ ಮರಳಲಿದೆ ಎಂದು ವಕೀಲ ತಿಳಿಸಿದ್ದಾರೆ.
6/ 7
ಕೋಲಾರದಲ್ಲಿ 2019ರ ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡುವ ವೇಳೆ ರಾಹುಲ್ ಗಾಂಧಿ ' ಎಲ್ಲಾ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ? ಎಂದು ಪ್ರಶ್ನಿಸಿದ್ದರು. ಅದನ್ನು ಪ್ರಶ್ನಿಸಿ ಸೂರತ್ (ಪಶ್ಚಿಮ) ಕ್ಷೇತ್ರದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
7/ 7
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಪ್ರಜಾಪ್ರಭುತ್ವವನ್ನು ಉಳಿಸಲು ಮಿತ್ರಕಾಲ ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರವಾಗಿದೆ ಎಂದು ಸೋಮವಾರ ಹೇಳಿದ್ದಾರೆ.