ಭಾರೀ ಮಳೆಯಿಂದಾಗಿ ಚೆನ್ನೈನ ಟಿಪಿ ಛತ್ರಂ ಪ್ರದೇಶದ ಸ್ಮಶಾನದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ವರಿ ಭುಜದ ಮೇಲೆ ಹೊತ್ತುಕೊಂಡು ಆಟೋದಲ್ಲಿ ಹತ್ತಿರದ ಆಸ್ಪತ್ರೆಗೆ ಧಾವಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ವರಿ ಅವರ ನಿಸ್ವಾರ್ಥ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.