ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿರುವ ತಿರುಮಲ ದೇವಸ್ಥಾನದ ಮುಖ್ಯ ಗರ್ಭಗುಡಿಯನ್ನು 2023 ರ ವೇಳೆಗೆ ಆರರಿಂದ ಎಂಟು ತಿಂಗಳವರೆಗೆ ಮುಚ್ಚುವ ಸಾಧ್ಯತೆಯಿದೆ. (ಸಾಂದರ್ಭಿಕ ಚಿತ್ರ)
2/ 7
ಗರ್ಭಗುಡಿಯ ಮೇಲಿರುವ ಮೂರು ಅಂತಸ್ತಿನ ಗುಮ್ಮಟದ ಆಕಾರದ ಗೋಪುರವನ್ನು ಬದಲಿಸುವ ಕಾಮಗಾರಿ ನಡೆಸಲು ತಿರುಪತಿ ದೇವಸ್ಥಾನವನ್ನು ಮುಚ್ಚುವ ಸಾಧ್ಯತೆಯಿದೆ. (ಸಾಂದರ್ಭಿಕ ಚಿತ್ರ)
3/ 7
ಈ ಕಾಮಗಾರಿ ಮುಗಿಯುವವರೆಗೂ ಭಕ್ತರಿಗಾಗಿ ಮುಖ್ಯ ದೇವಸ್ಥಾನದ ಪಕ್ಕದಲ್ಲಿರುವ ತಾತ್ಕಾಲಿಕ ದೇವಸ್ಥಾನದಲ್ಲಿ ವೆಂಕಟೇಶ್ವರನ ವಿಗ್ರಹದ ಪ್ರತಿಕೃತಿಯನ್ನು ಸ್ಥಾಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
4/ 7
2023ರ ಫೆಬ್ರವರಿ ತಿಂಗಳಲ್ಲಿ ತಿರುಪತಿ ದೇವಸ್ಥಾನದಲ್ಲಿ ಈ ಕಾಮಗಾರಿ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಟಿಟಿಡಿ ಮುಖ್ಯಸ್ಥ ವೈ.ವಿ ಸುಬ್ಬರಾವ್ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
5/ 7
ಡಿಸೆಂಬರ್ ತಿಂಗಳ ಅಂತ್ಯದ ಒಳಗೆ ತಿರುಪತಿ ತಿರುಮಲ ದೇವಸ್ಥಾನದ ಹೊಸ ಕಾಮಗಾರಿಯ ಕುರಿತು ಅಧಿಕೃತ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ. (ಸಾಂದರ್ಭಿಕ ಚಿತ್ರ)
6/ 7
ತಿರುಪತಿ ತಿಮ್ಮಪ್ಪನ ಮೂಲ ದೇವಾಲಯವನ್ನು ಮರು ಸ್ಥಾಪಿಸುವವರೆಗೆ ತಾತ್ಕಾಲಿಕ ದೇವಾಲಯದಲ್ಲೇ ದರ್ಶನ ಸೇರಿ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. (ಸಾಂದರ್ಭಿಕ ಚಿತ್ರ)
7/ 7
2023ರಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಮಾಡಬಯಸುವವರು ಈ ಸುದ್ದಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಒಳಿತು. (ಸಾಂದರ್ಭಿಕ ಚಿತ್ರ)