ಇವರ ಸಾವಿನ ನಂತರ ಯುಎಇ ರಾಷ್ಟ್ರದ ಅಧ್ಯಕ್ಷರ ಸ್ಥಾನವನ್ನು ಅವರ ಮಲಸಹೋದರ, ಅಬುಧಾಬಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಜಾಯೆದ್ ಅವರು ವಹಿಸಿಕೊಳ್ಳುವ ಸಾಧ್ಯತೆ ಇದು ಎಂದು ವರದಿಗಳು ತಿಳಿಸಿವೆ
ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ನಿಧನರಾಗಿದ್ದಾರೆ. 73 ನೇ ವಯಸ್ಸಿನ ಅವರ ನಿಧನದ ಸುದ್ದಿಯನ್ನು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ದೃಢಪಡಿಸಿದೆ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.
2/ 8
ಅನಾರೋಗ್ಯಕ್ಕೆ ತುತ್ತಾದ ಬಳಿಕ ಸಾರ್ವಜನಿಕವಾಗಿ ಹೆಚ್ಚಾಗಿ ಇವರು ಕಾಣಿಸಿಕೊಳ್ಳುತ್ತಿರಲಿಲ್ಲ. ಇವರ ಸಾವಿನ ನಂತರ ಯುಎಇ ರಾಷ್ಟ್ರದ ಅಧ್ಯಕ್ಷರ ಸ್ಥಾನವನ್ನು ಅವರ ಮಲಸಹೋದರ, ಅಬುಧಾಬಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಜಾಯೆದ್ ಅವರು ವಹಿಸಿಕೊಳ್ಳುವ ಸಾಧ್ಯತೆ ಇದು ಎಂದು ವರದಿಗಳು ತಿಳಿಸಿವೆ
3/ 8
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ, ಯುಎಇ ಜನರು, ಅರಬ್ ಮತ್ತು ಇಸ್ಲಾಮಿಕ್ ರಾಷ್ಟ್ರಗಳು ಅಧ್ಯಕ್ಷ ಹಿಸ್ ಹೈನೆಸ್ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ ಎಂದು ತಿಳಿಸಿದೆ.
4/ 8
ಅಧ್ಯಕ್ಷರ ನಿಧನ ಹಿನ್ನಲೆ ಸಚಿವಾಲಯವು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಶುಕ್ರವಾರದಿಂದ ಧ್ವಜಗಳನ್ನು ಅರ್ಧಮಟ್ಟಕ್ಕಿಳಿಸಲಾಗಿದ್ದು, ಮೂರು ದಿನಗಳವರೆಗೆ ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ.
5/ 8
ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಯುಎಇ ಜನರು, ಅರಬ್ ಮತ್ತು ಇಸ್ಲಾಮಿಕ್ ರಾಷ್ಟ್ರಗಳು ಮತ್ತು ಜಗತ್ತಿಗೆ ಅಧ್ಯಕ್ಷ ಹಿಸ್ ಹೈನೆಸ್ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.
6/ 8
ಶೇಖ್ ಖಲೀಫಾ ಅವರು ನವೆಂಬರ್ 2004 ರಲ್ಲಿ ಯುಎಇಯ ಎರಡನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಶ್ರೀಮಂತ ರಾಗಿದ್ದ ಇವರು ಅಬುಧಾಬಿಯ 16 ನೇ ಆಡಳಿತಗಾರರಾದರು.
7/ 8
ಅಧ್ಯಕ್ಷರಾಗಿ ಚುನಾಯಿತರಾದ ನಂತರ, ಶೇಖ್ ಖಲೀಫಾ ಅವರು ಯುಎಇ ಸರ್ಕಾರಕ್ಕೆ ಸಮತೋಲಿತ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಲು ತಮ್ಮ ಮೊದಲ ಕಾರ್ಯತಂತ್ರದ ಯೋಜನೆಯನ್ನು ಪ್ರಾರಂಭಿಸಿದರು,
8/ 8
ಪಾರ್ಶ್ವವಾಯುಗೆ ಒಳಗಾದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಆದರೂ ಅವರು ತೀರ್ಪುಗಳನ್ನು ನೀಡುವುದನ್ನು ಮುಂದುವರೆಸಿದ್ದಾರೆ. 2014ರಿಂದ ಇವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ