PHOTOS ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಉದ್ಧವ್​ ಠಾಕ್ರೆ ಪದಗ್ರಹಣ ಕಾರ್ಯಕ್ರಮದ ಚಿತ್ರಗಳು

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಉದ್ಧವ್ ಠಾಕ್ರೆ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ರಿಲಯನ್ಸ್​ ಇಂಡಸ್ಟ್ರೀಸ್​ ಚೇರ್ಮನ್ ಮುಖೇಶ್ ಅಂಬಾನಿ, ಹಾಗೂ ಪತ್ನಿ ನೀತಾ ಅಂಬಾನಿ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್ ನ ಹಲವು ಮುಖಂಡರು ಭಾಗವಹಿಸಿದ್ದರು

First published: