ಭಾರತೀಯ ರೈಲ್ವೇ ಈಗಾಗಲೇ ದೇಶಾದ್ಯಂತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಆರಂಭಿಸಿರುವುದು ಎಲ್ಲರಿಗೂ ತಿಳಿದಿದೆ. ಈಗಾಗಲೇ 14 ವಂದೇ ಭಾರತ್ ರೈಲುಗಳು ಪ್ರಯಾಣಿಕರಿಗೆ ಸೇವೆ ನೀಡುತ್ತಿವೆ. ಆಗಸ್ಟ್ 15 ರೊಳಗೆ 75 ವಂದೇ ಭಾರತ್ ರೈಲುಗಳನ್ನು ಮತ್ತು ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ 400 ವಂದೇ ಭಾರತ್ ರೈಲುಗಳನ್ನು ಓಡಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.