Viral Video: ಗುಂಡು ಹಾರಿಸಿ ಮಕ್ಕಳನ್ನು ಹೆದರಿಸಿದ ಸಚಿವರ ಮಗನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ಪಾಟ್ನಾ(ಜ.24): ತೋಟವೊಂದರಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಆರೋಪ ಹಿನ್ನೆಲೆ, ಬಿಹಾರದ ಸಚಿವರೊಬ್ಬರ(Bihar Minister) ಮಗನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಹಲ್ಲೆ(beaten) ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ(Social Media) ಸಖತ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಗ್ರಾಮಸ್ಥರು ಸಚಿವರ ಮಗನಿಗೆ ಯದ್ವಾತದ್ವಾ ಥಳಿಸಿದ್ದಾರೆ. ಗುಂಡು ಹಾರಿಸಿದ್ದಾರೆ ಎನ್ನಲಾದ ಬಂದೂಕನ್ನು(Gun) ಸಹ ಸಚಿವರ ಮಗನಿಂದ ಕಸಿದುಕೊಂಡಿರುವ ದೃಶ್ಯ ಈ ವಿಡಿಯೋದಲ್ಲಿ ಸೆರೆಯಾಗಿದೆ.

First published: