Kaustav Bagchi: ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿದ ಕಾಂಗ್ರೆಸ್ ವಕ್ತಾರನನ್ನು ಬಂಧಿಸಿದ ಪಶ್ಚಿಮ ಬಂಗಾಳ ಪೊಲೀಸರು!
ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎನ್ನುವ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ಪಕ್ಷದ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ನಿರಂತರ ಹೇಳಿಕೆ ನೀಡಿರುವ ಆರೋಪದಲ್ಲಿ ಅವರನ್ನು ಕೋಲ್ಕತಾ ಪೊಲೀಸರು ನಸುಕಿನ 3.30ರ ಸುಮಾರಿಗೆ ದಾಳಿ ನಡೆಸಿ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.
ಮಮತಾ ಬ್ಯಾನರ್ಜಿ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬುರ್ಟೊಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರನ್ವಯ ನಸುಕಿನ ಜಾವ ಕೌಸ್ತವ್ ಮನೆಗೆ ದಾಳಿ ನಡೆಸಿದ ಪೊಲೀಸರ ಬೃಹತ್ ತಂಡ ಅವರನ್ನು ಬಂಧಿಸಿದೆ.
2/ 7
ಕೌಸ್ತವ್ ಬಾಗ್ಚಿ ಬಂಧನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ‘ನಾವು ಕೌಸ್ತವ್ ಬಾಗ್ಚಿ ಅವರನ್ನು ಬ್ಯಾರಕ್‌ಪೋರ್‌ನಲ್ಲಿನ ನಿವಾಸದಿಂದ ಬಂಧಿಸಿದ್ದೇವೆ. ಈಗ ನಾವು ಅದರ ಬಗ್ಗೆ ಹೆಚ್ಚು ಮಾಹಿತಿ ನೀಡಲು ಸಾಧ್ಯವಿಲ್ಲ. ನಮ್ಮ ಅಧಿಕಾರಿಗಳು ಅವರೊಂದಿಗೆ ಮಾತನಾಡುತ್ತಿದ್ದಾರೆ’ ಎಂದು ಹೇಳಿದ್ದರು.
3/ 7
ಕೌಸ್ತವ್ ಬಾಗ್ಚಿ ವಿರುದ್ಧ ಐಪಿಸಿ ಸೆಕ್ಷನ್ 120 (ಬಿ) (ಕ್ರಿಮಿನಲ್ ಪಿತೂರಿ), 504 (ಶಾಂತಿ ಭಂಗದ ಉದ್ದೇಶದ ಪ್ರಚೋದನೆಯೊಂದಿಗೆ ಉದ್ದೇಶಪೂರ್ವಕ ಅವಮಾನ) 506 (ಕ್ರಿಮಿನಲ್ ಬೆದರಿಕೆ) ಮತ್ತು ಇತರೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
4/ 7
ಕೌಸ್ತವ್ ಬಾಗ್ಚಿ ಬಂಧನಕ್ಕೊಳಗಾದ ವಿಷಯ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಬುರ್ಟೊಲ್ಲಾ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ದೀದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
5/ 7
ಉಪಚುನಾವಣಾ ಫಲಿತಾಂಶದಲ್ಲಿ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ವಿಧಾನಸಭಾ ಕ್ಷೇತ್ರದಲ್ಲಿ, ಕಾಂಗ್ರೆಸ್‌ನ ಬೇರಾನ್ ಬಿಸ್ವಾಸ್ ಅವರು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯನ್ನು 22,986 ಮತಗಳ ಅಂತರದಿಂದ ಸೋಲಿಸಿದ್ದರು. ಇದರಿಂದ ಆಡಳಿತಾರೂಢ ಟಿಎಂಸಿ ಪಕ್ಷಕ್ಕೆ ತೀವ್ರ ಮುಖಭಂಗ ಆಗಿತ್ತು.
6/ 7
ಸಗರ್ಡಿಘಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಂಡ ಬಳಿಕ ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದ ಮಮತಾ ಬ್ಯಾನರ್ಜಿ ವಿರುದ್ಧ ಕೌಸ್ತವ್ ತೀಕ್ಷ್ಣ ವಾಗ್ದಾಳಿ ನಡೆಸಿದ್ದರು.
7/ 7
ಕೌಸ್ತವ್ ಬಾಗ್ಚಿಯನ್ನು ಪೊಲೀಸರು ಬಂಧನ ಮಾಡಿದ ಕೆಲವೇ ಗಂಟೆಗಳ ನಂತರ ಅಂದರೆ ಶನಿವಾರ ಸಂಜೆ ವೇಳೆಗೆ ಕೋಲ್ಕತ್ತಾ ಹೈಕೋರ್ಟ್ ಬಾಗ್ಚಿಗೆ 1000 ರೂಪಾಯಿಯ ಬಾಂಡ್ ಬರೆಸಿ ಜಾಮೀನು ನೀಡಿತು.
First published:
17