Wrestlers Protest: ಕುಸ್ತಿ ಫೆಡರೇಷನ್ ಅಧ್ಯಕ್ಷನ ವಿರುದ್ಧ ಮತ್ತೆ ಬೀದಿಗಳಿದು ಪ್ರತಿಭಟಿಸಿದ ಭಾರತದ ಕುಸ್ತಿಪಟುಗಳು!

ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪದ ವಿರುದ್ಧ ಭಾರತದ ಅಗ್ರಮಾನ್ಯ ಕುಸ್ತಿಪಟುಗಳು ಬೀದಿಗಿಳಿದಿದ್ದಾರೆ.

First published:

  • 17

    Wrestlers Protest: ಕುಸ್ತಿ ಫೆಡರೇಷನ್ ಅಧ್ಯಕ್ಷನ ವಿರುದ್ಧ ಮತ್ತೆ ಬೀದಿಗಳಿದು ಪ್ರತಿಭಟಿಸಿದ ಭಾರತದ ಕುಸ್ತಿಪಟುಗಳು!

    ಲೈಂಗಿಕ ಕಿರುಕುಳ ನೀಡಿರುವ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ತಮ್ಮೊಂದಿಗೆ ಕೈಜೋಡಿಸುವಂತೆ ರಾಜಕೀಯ ಪಕ್ಷಗಳಿಕೆ ಕರೆ ನೀಡಿದ್ದಾರೆ.

    MORE
    GALLERIES

  • 27

    Wrestlers Protest: ಕುಸ್ತಿ ಫೆಡರೇಷನ್ ಅಧ್ಯಕ್ಷನ ವಿರುದ್ಧ ಮತ್ತೆ ಬೀದಿಗಳಿದು ಪ್ರತಿಭಟಿಸಿದ ಭಾರತದ ಕುಸ್ತಿಪಟುಗಳು!

    ಕಳೆದ ಜನವರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕ್ರೀಡಾಪಟುಗಳ ಬೆಂಬಲಕ್ಕೆ ಬಂದಿದ್ದ ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರನ್ನು ವೇದಿಕೆಯಿಂದ ಹೊರ ಹೋಗುವಂತೆ ಹೇಳಿದ್ದರು.

    MORE
    GALLERIES

  • 37

    Wrestlers Protest: ಕುಸ್ತಿ ಫೆಡರೇಷನ್ ಅಧ್ಯಕ್ಷನ ವಿರುದ್ಧ ಮತ್ತೆ ಬೀದಿಗಳಿದು ಪ್ರತಿಭಟಿಸಿದ ಭಾರತದ ಕುಸ್ತಿಪಟುಗಳು!

    ಆದರೆ ಈ ಬಾರಿ ಯಾರನ್ನೂ ತಿರಸ್ಕರಿಸುವುದಿಲ್ಲ. ನಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ನಮ್ಮೊಂದಿಗೆ ಕೈಜೋಡಿಸಬಹುದು ಎಂದು ಕುಸ್ತಿಪಟುಗಳು ಹೇಳಿದ್ದಾರೆ.

    MORE
    GALLERIES

  • 47

    Wrestlers Protest: ಕುಸ್ತಿ ಫೆಡರೇಷನ್ ಅಧ್ಯಕ್ಷನ ವಿರುದ್ಧ ಮತ್ತೆ ಬೀದಿಗಳಿದು ಪ್ರತಿಭಟಿಸಿದ ಭಾರತದ ಕುಸ್ತಿಪಟುಗಳು!

    ಈ ಬಾರಿ, ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಬೆಂಬಲಿಸಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.

    MORE
    GALLERIES

  • 57

    Wrestlers Protest: ಕುಸ್ತಿ ಫೆಡರೇಷನ್ ಅಧ್ಯಕ್ಷನ ವಿರುದ್ಧ ಮತ್ತೆ ಬೀದಿಗಳಿದು ಪ್ರತಿಭಟಿಸಿದ ಭಾರತದ ಕುಸ್ತಿಪಟುಗಳು!

    ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಕುಸ್ತಿಪಟುಗಳ ಆರೋಪವಾಗಿದೆ.

    MORE
    GALLERIES

  • 67

    Wrestlers Protest: ಕುಸ್ತಿ ಫೆಡರೇಷನ್ ಅಧ್ಯಕ್ಷನ ವಿರುದ್ಧ ಮತ್ತೆ ಬೀದಿಗಳಿದು ಪ್ರತಿಭಟಿಸಿದ ಭಾರತದ ಕುಸ್ತಿಪಟುಗಳು!

    ಹೀಗಾಗಿ ಕುಸ್ತಿಪಟುಗಳು ಮರಳಿ ಪ್ರತಿಭಟನೆ ಆರಂಭಿಸಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದ್ದಾರೆ. ಆಶ್ವಾಸನೆ ನೀಡಿದ್ದರಿಂದ ನಾವು ಜನವರಿಯಲ್ಲಿ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೆವು. ಅದು ಸುಳ್ಳು ಆಶ್ವಾಸನೆಯಾಗಿತ್ತು. ಈ ಬಾರಿ ಕ್ರಮ ಕೈಗೊಳ್ಳದ ಹೊರತು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ತಿಳಿಸಿದ್ದಾರೆ.

    MORE
    GALLERIES

  • 77

    Wrestlers Protest: ಕುಸ್ತಿ ಫೆಡರೇಷನ್ ಅಧ್ಯಕ್ಷನ ವಿರುದ್ಧ ಮತ್ತೆ ಬೀದಿಗಳಿದು ಪ್ರತಿಭಟಿಸಿದ ಭಾರತದ ಕುಸ್ತಿಪಟುಗಳು!

    ಎರಡೂವರೆ ತಿಂಗಳ ಹಿಂದೆ ಪ್ರಕರಣ ಸಂಬಂಧ ಸಮಿತಿಯೊಂದನ್ನು ರಚನೆ ಮಾಡಲಾಗಿತ್ತು. ನಮಗೆ ಹಲವು ಬಾರಿ ಭರವಸೆಗಳನ್ನು ನೀಡಿದ್ದರು. ಹೀಗಾಗಿ ತಿಂಗಳುಗಟ್ಟಲೆ ಕಾದು ಕುಳಿತಿದ್ದೆವು. ಆದರೆ, ಯಾವುದೇ ಭರವಸೆಗಳನ್ನೂ ಅಧಿಕಾರಿಗಳು ಈಡೇರಿಸಿಲ್ಲ. ಈ ಬಾರಿ ಕ್ರಮ ಕೈಗೊಳ್ಳದ ಹೊರತು ನಾನು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.

    MORE
    GALLERIES