ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಕೊಹ್ಲಿ 319 ಬೌಂಡರಿಗಳನ್ನು ಬಾರಿಸಿದ್ದಾರೆ. ಐರ್ಲೆಂಡ್‌ನ ಆರಂಭಿಕ ಆಟಗಾರ ಪಾಲ್ ಸ್ಟಿರ್ಲಿಂಗ್ (344) ಹೆಸರು ಮೊದಲ ಸ್ಥಾನದಲ್ಲಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ (323) ಎರಡನೇ ಸ್ಥಾನದಲ್ಲಿದ್ದಾರೆ.