ಇತ್ತ ಸ್ಮೃತಿ ಮಂಧಾನ ದೊಡ್ಡ ಮೊತ್ತಕ್ಕೆ ಬಿಡ್ ಆಗುತ್ತಿದ್ದಂತೆ ಟೀಂ ಇಂಡಿಯಾ ಆಟಗಾರರು ಕುಣಿದಾಡಿ ಸಂಭ್ರಮಿಸಿದ್ದಾರೆ. ಮುಂಬೈನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಯನ್ನು ಟೀಂ ಇಂಡಿಯಾ ಆಟಗಾರ ದಕ್ಷಿಣ ಆಫ್ರಿಕಾದಲ್ಲಿ ವೀಕ್ಷಿಸಿದ್ದಾರೆ. ಸ್ಮೃತಿ ಮಂಧಾನ ಈ ವೇಳೆ ಟೀಂ ಇಂಡಿಯಾ ಕ್ಯಾಪ್ಟನ್ ಹರ್ಮನ್ ಪ್ರೀತ್ ಕೌರ್ ಅವರನ್ನು ತಬ್ಬಿ ಸಂಭ್ರಮಿಸಿದ್ದಾರೆ.