ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತೊಮ್ಮೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (ಪಿಸಿಬಿ) ಶಾಕ್ ನೀಡಿದೆ. 2023ರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಪಾಕಿಸ್ತಾನ ಆಯೋಜಿಸಲಿದೆ. ಟೂರ್ನಮೆಂಟ್ ಸೆಪ್ಟೆಂಬರ್ 2 ರಂದು ಪ್ರಾರಂಭವಾಗಲಿದೆ. ಆದರೆ, ಏಷ್ಯಾಕಪ್ ಪಾಕಿಸ್ತಾನದಲ್ಲಿ ನಡೆಯಲಿರುವ ಕಾರಣ ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಿರುವುದು ಅನಿವಾರ್ಯವಾಗಿದೆ.
ಹಲವು ಚರ್ಚೆಗಳ ನಂತರ, ಪಿಸಿಬಿಯ ಅನುಮೋದನೆಯೊಂದಿಗೆ ಭಾರತ ತಂಡ ಆಡುವ ಪಂದ್ಯಗಳನ್ನು ಯುಎಇಯಲ್ಲಿ ನಡೆಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ನಿರ್ಧರಿಸಿದೆ. ಆದರೆ ಯುಎಇಯಲ್ಲಿ ಭಾರತ ತನ್ನ ಪಂದ್ಯಗಳನ್ನು ಆಡಲು ಹೈಬ್ರಿಡ್ ಮಾದರಿಯ ಪಾಕಿಸ್ತಾನದ ಪ್ರಸ್ತಾಪವನ್ನು ಉಳಿದ ಸದಸ್ಯ ರಾಷ್ಟ್ರಗಳು ತಿರಸ್ಕರಿಸಿವೆ. ಆದರೆ, ಈಗ ಪಿಸಿಬಿಗೆ ಕೊಂಚ ರಿಲೀಫ್ ಸಿಕ್ಕಿದೆ ಎಂದು ವರದಿಯಾಗಿದೆ. ವಾಸ್ತವವಾಗಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಪಿಸಿಬಿಯ ಹೊಸ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡಿದೆ ಎಂದು ವರದಿಗಳಿವೆ.
ಏಷ್ಯಾಕಪ್ ಟೂರ್ನಿ ಪಾಕಿಸ್ತಾನದಲ್ಲಿ ನಡೆಯಲಿದೆ. ಆದರೆ ಭಾರತ ತಂಡ ತಟಸ್ಥ ಸ್ಥಳದಲ್ಲಿ ಪಂದ್ಯಗಳನ್ನು ಆಡಲಿದೆ. ಏಷ್ಯಾ ಕಪ್ ಟೂರ್ನಿಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲ ಸುತ್ತಿನ ಪಂದ್ಯಗಳಿಗೆ ಪಾಕಿಸ್ತಾನ ಆತಿಥ್ಯ ವಹಿಸಲಿದ್ದು, ಈ ಸುತ್ತಿನಲ್ಲಿ ಭಾರತದ ವಿರುದ್ಧ ಯಾವುದೇ ಪಂದ್ಯಗಳು ನಡೆಯುವುದಿಲ್ಲ. ಭಾರತ ತಂಡ ಎರಡನೇ ಸುತ್ತಿನಲ್ಲಿ ಆಡಲಿದೆ. ಅಲ್ಲದೆ ಟೂರ್ನಿಯ ಫೈನಲ್ ಪಂದ್ಯ ತಟಸ್ಥ ಸ್ಥಳದಲ್ಲಿ ನಡೆಯಲಿದೆ.