ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ನಡೆಯಿತು. ಸರಣಿಯ ಎರಡನೇ ಪಂದ್ಯ ಫೆಬ್ರವರಿ 17 ರಿಂದ ದೆಹಲಿಯಲ್ಲಿ ನಡೆಯಲಿದ್ದು, ಮೂರನೇ ಟೆಸ್ಟ್ ಈಗ ಇಂದೋರ್‌ನಲ್ಲಿ ಮಾರ್ಚ್ 1 ರಿಂದ ನಡೆಯಲಿದೆ. ನಾಲ್ಕನೇ ಮತ್ತು ಕೊನೆಯ ಟೆಸ್ಟ್ ಮಾರ್ಚ್ 9 ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.