IPL 2023: ಐಪಿಎಲ್ ಇತಿಹಾಸದಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಟೀಂ ಇಂಡಿಯಾ ಬೌಲರ್​!

IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶನಿವಾರ ನಡೆದ ರೋಚಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 9 ರನ್‌ಗಳ ಜಯ ಸಾಧಿಸಿದೆ. ಈ ಪಂದ್ಯದ ವೇಳೆ ಭಾರತದ ವೇಗಿ ಭುವನೇಶ್ವರ್​ ಕುಮಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ.

First published:

  • 17

    IPL 2023: ಐಪಿಎಲ್ ಇತಿಹಾಸದಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಟೀಂ ಇಂಡಿಯಾ ಬೌಲರ್​!

    ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023) ಋತುವಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಮ್ಮ ಮೂರನೇ ಗೆಲುವು ಸಾಧಿಸಿದೆ. ಹ್ಯಾಟ್ರಿಕ್ ಸೋಲಿನ ನಂತರ ತಂಡಕ್ಕೆ ಗೆಲುವು ಬಂದಿರುವುದರಿಂದ ಅಂಕಪಟ್ಟಿಯಲ್ಲಿಯೂ ಏರಿಕೆ ಕಂಡಿದೆ.

    MORE
    GALLERIES

  • 27

    IPL 2023: ಐಪಿಎಲ್ ಇತಿಹಾಸದಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಟೀಂ ಇಂಡಿಯಾ ಬೌಲರ್​!

    ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶನಿವಾರ ನಡೆದ ರೋಚಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 9 ರನ್‌ಗಳ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತು.

    MORE
    GALLERIES

  • 37

    IPL 2023: ಐಪಿಎಲ್ ಇತಿಹಾಸದಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಟೀಂ ಇಂಡಿಯಾ ಬೌಲರ್​!

    ಬಳಿಕ 198 ರನ್ ಗಳ ಬೃಹತ್ ಗುರಿ ಬೆನ್ನಟ್ಟಿದ ಇಳಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್‌ಮನ್‌ಗಳಾದ ಫಿಲಿಪ್ ಸಾಲ್ಟ್ 59 ರನ್ ಮತ್ತು ಮಿಚೆಲ್ ಮಾರ್ಷ್ 63 ರನ್ ಗಳಿಸಿದರು.

    MORE
    GALLERIES

  • 47

    IPL 2023: ಐಪಿಎಲ್ ಇತಿಹಾಸದಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಟೀಂ ಇಂಡಿಯಾ ಬೌಲರ್​!

    ಈ ಪಂದ್ಯದ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅಪರೂಪದ ದಾಖಲೆಯನ್ನು ನಿರ್ಮಿಸಿದ್ದಾರೆ. ಮೊದಲ ಓವರ್‌ನಲ್ಲಿ ಡೇವಿಡ್ ವಾರ್ನರ್ (0) ಅವರನ್ನು ಔಟ್ ಮಾಡುವ ಮೂಲಕ ಭುವಿ ಈ ದಾಖಲೆ ಮಾಡಿದ್ದಾರೆ.

    MORE
    GALLERIES

  • 57

    IPL 2023: ಐಪಿಎಲ್ ಇತಿಹಾಸದಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಟೀಂ ಇಂಡಿಯಾ ಬೌಲರ್​!

    ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ಮೊದಲ ಓವರ್‌ನಲ್ಲಿ ಇದುವರೆಗೆ 24 ವಿಕೆಟ್‌ಗಳನ್ನು (ವಾರ್ನರ್ ಅವರ ವಿಕೆಟ್ ಸೇರಿದಂತೆ) ಪಡೆದಿದ್ದಾರೆ. ಭುವನೇಶ್ವರ್ ಕುಮಾರ್ ಐಪಿಎಲ್ ಇತಿಹಾಸದಲ್ಲಿ ಮೊದಲ ಓವರ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

    MORE
    GALLERIES

  • 67

    IPL 2023: ಐಪಿಎಲ್ ಇತಿಹಾಸದಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಟೀಂ ಇಂಡಿಯಾ ಬೌಲರ್​!

    ರಾಜಸ್ಥಾನ್ ರಾಯಲ್ಸ್ ಬೌಲರ್ ಟ್ರೆಂಟ್ ಬೌಲ್ಟ್ (21 ವಿಕೆಟ್) ಭುವನೇಶ್ವರ್ ಕುಮಾರ್ ನಂತರ ಎರಡನೇ ಸ್ಥಾನದಲ್ಲಿದ್ದಾರೆ. ಪ್ರವೀಣ್ ಕುಮಾರ್ (15 ವಿಕೆಟ್) ಮೂರನೇ ಸ್ಥಾನದಲ್ಲಿದ್ದಾರೆ.

    MORE
    GALLERIES

  • 77

    IPL 2023: ಐಪಿಎಲ್ ಇತಿಹಾಸದಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಟೀಂ ಇಂಡಿಯಾ ಬೌಲರ್​!

    ಈ ಗೆಲುವಿನೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ಲೀಗ್ ಅಂಕಪಟ್ಟಿಯಲ್ಲಿ ಒಂದು ಸ್ಥಾನ ಸುಧಾರಿಸಿದೆ. 6 ಅಂಕಗಳೊಂದಿಗೆ 8ನೇ ಸ್ಥಾನ. ಹಾಗೂ ಮುಂಬೈ ಇಂಡಿಯನ್ಸ್ 9ನೇ ಸ್ಥಾನಕ್ಕೆ ಕುಸಿದಿದೆ. ಡೆಲ್ಲಿ ಕ್ಯಾಪಿಟಲ್ಸ್ 10ನೇ ಸ್ಥಾನದಲ್ಲಿ ಮುಂದುವರಿದಿದೆ. (ಸುದ್ದಿ ಬರೆಯುವ ವೇಳೆಗೆ ಇರುವ ಅಂಕಪಟ್ಟಿ)

    MORE
    GALLERIES