ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್‌ನ ಅತ್ಯಂತ ಪ್ರತಿಷ್ಠಿತ ಪಂದ್ಯಾವಳಿಗಳಲ್ಲಿ ಒಂದಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ಸರಣಿ ಹಲವು ಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಫೆಬ್ರವರಿ 9 ರಿಂದ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಫೈನಲ್ ತಲುಪಲು ಆಸ್ಟ್ರೇಲಿಯಾ ವಿರುದ್ಧ ಗೆಲ್ಲಬೇಕಿದೆ.
ಜನವರಿ 2021 ರಿಂದ ಅವರು 17 ಪಂದ್ಯಗಳಲ್ಲಿ 31.78 ರ ಸರಾಸರಿಯಲ್ಲಿ 66 ವಿಕೆಟ್‌ಗಳನ್ನು ಪಡೆದಿದ್ದಾರೆ. ಆದರೆ ಅವರ ಸ್ಟ್ರೈಕ್ ರೇಟ್ 74.7 ಆಗಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾವು ಲಿಯಾನ್ ಮೇಲೆ ಹೆಚ್ಚು ಅವಲಂಬಿತವಾಗಿದೆ. ಸದ್ಯಕ್ಕೆ ಲಿಯಾನ್ ಉತ್ತಮ ಫಾರ್ಮ್‌ನಲ್ಲಿ ಇಲ್ಲದಿದ್ದರೂ ಮುಂಬರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ತೊಂದರೆ ನೀಡುವ ಸಾಧ್ಯತೆ ಹೆಚ್ಚಿದೆ.
ವಿರಾಟ್ ಕೊಹ್ಲಿ: ಕೆಲ ದಿನಗಳಿಂದ ಫಾರ್ಮ್ ಕಳೆದುಕೊಂಡು ಕಂಗೆಟ್ಟಿದ್ದ ಕೊಹ್ಲಿ ಮತ್ತೆ ಫಾರ್ಮ್ಗೆ ಮರಳಿದ್ದಾರೆ. ಇತ್ತೀಚೆಗೆ ಕೊಹ್ಲಿ ಸತತ ಶತಕ ಸಿಡಿಸುತ್ತಿದ್ದಾರೆ. ಆದರೆ ವಿರಾಟ್ ಕಳೆದ ವರ್ಷ ಆರು ಟೆಸ್ಟ್ ಪಂದ್ಯಗಳಲ್ಲಿ 26.50 ಕ್ಕಿಂತ ಕಡಿಮೆ ಸರಾಸರಿಯಲ್ಲಿ ಕೇವಲ 265 ರನ್ ಗಳಿಸಿದ್ದರು. ಇತ್ತೀಚೆಗೆ ಅವರು ಬಾಂಗ್ಲಾದೇಶ ಸರಣಿಯಲ್ಲಿ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಕೇವಲ 45 ರನ್ ಗಳಿಸಿದ್ದರು.
ಆದರೆ ಕೊಹ್ಲಿ ಲಯಕ್ಕೆ ಬಂದರೆ ಅವರನ್ನು ತಡೆಯುವುದು ಕಷ್ಟ. 2014ರ ಇಂಗ್ಲೆಂಡ್ ಸರಣಿಯನ್ನು ನೋಡುವುದಾದರೆ ಅವರು 5 ಪಂದ್ಯಗಳಲ್ಲಿ 134 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಬಾರ್ಡರ್-ಗವಾಸ್ಕರ್ ಟ್ರೋಫಿ 2014ರಲ್ಲಿ ವಿರಾಟ್ ಒಟ್ಟು 692 ರನ್ ಗಳಿಸಿದ್ದರು. ಇದು ಇನ್ನೂ ಆಸ್ಟ್ರೇಲಿಯಾದಲ್ಲಿ ಭಾರತೀಯ ಆಟಗಾರನ ಗರಿಷ್ಠ ಸ್ಕೋರ್ ಆಗಿದೆ. ವಿರಾಟ್ ಇದುವರೆಗೆ ಆಸ್ಟ್ರೇಲಿಯಾ ವಿರುದ್ಧ 1682 ರನ್ ಗಳಿಸಿದ್ದಾರೆ. ಇದರಲ್ಲಿ 7 ಶತಕಗಳಿವೆ.
ಸ್ಟೀವ್ ಸ್ಮಿತ್: ಆಸ್ಟ್ರೇಲಿಯಾದ ಪ್ರಮುಖ ಆಟಗಾರ ಸ್ಟೀವ್ ಸ್ಮಿತ್ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ರೆಡ್-ಹಾಟ್ ಫಾರ್ಮ್‌ನಲ್ಲಿದ್ದಾರೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 231 ರನ್ ಗಳಿಸಿದ್ದರು. ಭಾರತದ ವಿರುದ್ಧ ಸ್ಮಿತ್ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿದ್ದಾರೆ. ಅವರು 72.58 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. 2017ರ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಪುಣೆಯಲ್ಲಿ 109 ರನ್ ಗಳಿಸಿದ ಅವರ ಅದ್ಭುತ ಇನ್ನಿಂಗ್ಸ್ ಆಡಿದ್ದರು.
ರವೀಂದ್ರ ಜಡೇಜಾ: ಜಡೇಜಾ ಮತ್ತೆ ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದು, 2022ರ ಏಷ್ಯಾಕಪ್‌ನಲ್ಲಿ ಮೊಣಕಾಲಿನ ಗಾಯದಿಂದ ಜಡೇಜಾ ಕ್ರಿಕೆಟ್‌ನಿಂದ ಹೊರಗುಳಿದಿದ್ದರು. ಇತ್ತೀಚೆಗಷ್ಟೇ ಸೌರಾಷ್ಟ್ರ ಪರ ತಮಿಳುನಾಡು ವಿರುದ್ಧ ರಣಜಿ ಪಂದ್ಯವನ್ನಾಡಿದ್ದ ಜಡೇಜಾ ಮೂರನೇ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ಪಡೆದಿದ್ದರು. ಟೆಸ್ಟ್ ಬೌಲರ್ ಆಗಿ, ಜಡೇಜಾ ಭಾರತದಲ್ಲಿ ಆಡಿದ ಕೇವಲ 36 ಪಂದ್ಯಗಳಲ್ಲಿ 20.66 ಸರಾಸರಿಯಲ್ಲಿ 175 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಶ್ರೇಷ್ಠ ದಾಖಲೆಯನ್ನು ನಿರ್ಮಿಸಿದ್ದಾರೆ.
ಚೇತೇಶ್ವರ ಪೂಜಾರ ತಮ್ಮ ಟೆಸ್ಟ್ ವೃತ್ತಿಜೀವನದ ಆರಂಭದಿಂದಲೂ ಆಸ್ಟ್ರೇಲಿಯಾ ವಿರುದ್ಧ ಮಿಂಚಿದ್ದಾರೆ. 2018ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಪೂಜಾರ ಉತ್ತುಂಗಕ್ಕೇರಿದ್ದರು. ಪ್ರವಾಸದಲ್ಲಿ ಅವರು 1,258 ಎಸೆತಗಳಲ್ಲಿ 521 ರನ್ ಗಳಿಸಿದ್ದರು. ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಪೂಜಾರ ಅತ್ಯುತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಾಂಗ್ಲಾದೇಶ ಸರಣಿಯಲ್ಲಿ 226 ರನ್ ಗಳಿಸಿದ್ದರು.