'ಏಪ್ರಿಲ್ 02, 2011' ಈ ದಿನಾಂಕವನ್ನು ಯಾರು ತಾನೆ ಮರೆಯಲು ಸಾಧ್ಯ ಹೇಳಿ. ಹೌದು, 10 ವರ್ಷಗಳ ಹಿಂದೆ ಇದೇ ದಿನ ಭಾರತ ಕ್ರಿಕೆಟ್ ತಂಡ ಎರಡನೇ ಬಾರಿ ವಿಶ್ವಕಪ್ಗೆ ಮುತ್ತಿಕ್ಕಿತು. ಅಂದು ಬರೋಬ್ಬರಿ 28 ವರ್ಷಗಳ ಬಳಿಕ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದು ಬೀಗಿತು. ಟೀಂ ಇಂಡಿಯಾ ಈ ಸಾಧನೆ ಮಾಡಿ ಇಂದಿಗೆ ಒಂದು ದಶಕ ತುಂಬಿದೆ.