ಶ್ರೀಲಂಕಾದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸನತ್ ಜಯಸೂರ್ಯ ಭಾರತದ ವಿರುದ್ಧ ಗರಿಷ್ಠ 7 ಏಕದಿನ ಶತಕಗಳನ್ನು ಗಳಿಸಿದ್ದಾರೆ. ಟೀಮ್ ಇಂಡಿಯಾ ವಿರುದ್ಧದ 89 ಪಂದ್ಯಗಳ 85 ಇನ್ನಿಂಗ್ಸ್‌ಗಳಲ್ಲಿ 7 ಶತಕಗಳು ಮತ್ತು 14 ಅರ್ಧಶತಕಗಳು ಒಳಗೊಂಡಂತೆ ಸನತ್ ಜಯಸೂರ್ಯ 2899 ರನ್ ಗಳಿಸಿದ್ದಾರೆ. ಈ ಮೂಲಕ ಭಾರತದ ವಿರುದ್ಧದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.