2019ರ ನವೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಡೇ ನೈಟ್ ಟೆಸ್ಟ್ನಲ್ಲಿ ವಿರಾಟ್ ತಮ್ಮ ಕೊನೆಯ ಅಂತರರಾಷ್ಟ್ರೀಯ ಶತಕ ಬಾರಿಸಿದ್ದರು. ಇದಾದ ಬಳಿಕ. ನ್ಯೂಜಿಲೆಂಡ್ ವಿರುದ್ಧ ಎರಡು ಟೆಸ್ಟ್, ಆಸ್ಟ್ರೇಲಿಯಾ ವಿರುದ್ಧ 1 ಮತ್ತು ಇಂಗ್ಲೆಂಡ್ ವಿರುದ್ಧ ಕೊಹ್ಲಿ 3 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಆದರೆ ಕಳೆದ ಒಂದೂವರೆ ವರ್ಷದಿಂದ ಕೊಹ್ಲಿ ಬ್ಯಾಟ್ನಿಂದ ಒಂದೇ ಒಂದು ಶತಕ ಮೂಡಿಬಂದಿಲ್ಲ.