ಹೀಗಾಗಿ ಇದುವೇ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಕೋಚ್ ರಿಕಿ ಪಾಂಟಿಂಗ್. ಈ ಬಗ್ಗೆ ಮಾತನಾಡಿರುವ ಪಾಂಟಿಂಗ್, 'ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಳ್ಳಲು ಕಾಯುತ್ತಿದ್ದೇನೆ. ಅಕ್ಷರ್ ಪಟೇಲ್ ಮತ್ತು ಅಶ್ವಿನ್ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಈ ಬಾರಿ ಹೆಚ್ಚಿನ ವಿಕೆಟ್ ಪಡೆಯಲು ಸಾಧ್ಯವಾಗುತ್ತದೆ ಎಂದು ನಿರೀಕ್ಷಿಸುತ್ತೇನೆ. ಹಾಗೆಯೇ ರಿಷಭ್ ಪಂತ್ ಕೂಡ ಹೆಚ್ಚಿನ ರನ್ ಗಳಿಸಲಿದ್ದಾರೆ ಎಂದು ಪಾಂಟಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಳೆದ ಎರಡು ಸೀಸನ್ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದೆ. 2019 ರಲ್ಲಿ ಡಿಸಿ ಪ್ಲೇಆಫ್‌ಗೆ ಪ್ರವೇಶಿಸಿತು. ಹಾಗೆಯೇ ಯುಎಇಯಲ್ಲಿ ನಡೆದ ಐಪಿಎಲ್ 2020 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಚೊಚ್ಚಲ ಬಾರಿ ಫೈನಲ್‌ಗೆ ಪ್ರವೇಶಿಸಿತ್ತು. ಇದೀಗ ದೇಶೀಯ ಪಿಚ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೂವರು ಆಟಗಾರರು ಭರ್ಜರಿ ಪ್ರದರ್ಶನ ನೀಡಿರುವುದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಲವನ್ನು ಹೆಚ್ಚಿಸಿದೆ.