ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಕಳೆದೆರೆಡು ವರ್ಷಗಳಿಂದ ಟೆಸ್ಟ್ ತಂಡದಿಂದ ಹೊರಗುಳಿದಿದ್ದಾರೆ. ಇದೀಗ ಐಪಿಎಲ್ಗಾಗಿ ಸಕಲ ಸಿದ್ಧತೆಯಲ್ಲಿರುವ ಗಬ್ಬರ್, ಮತ್ತೆ ಟೆಸ್ಟ್ ಟೀಮ್ಗೆ ಕಂಬ್ಯಾಕ್ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
2/ 7
ಕಳೆದ ವರ್ಷ ನಾನು ರಣಜಿ ಟ್ರೋಫಿಯಲ್ಲಿ ಶತಕ ಬಾರಿಸಿ ಆ ಮೂಲಕ ಟೀಮ್ ಇಂಡಿಯಾ ಏಕದಿನ ತಂಡಕ್ಕೆ ಮರಳಿದ್ದೆ. ಹಾಗೆಯೇ ಮತ್ತೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸವಿದೆ. ನಾನು ಯಾವತ್ತೂ ಭರವಸೆಯನ್ನು ಕಳೆದುಕೊಂಡಿಲ್ಲ ಎಂದು ಶಿಖರ್ ಧವನ್ ತಿಳಿಸಿದರು.
3/ 7
ನಾನು ಅವಕಾಶ ಸಿಕ್ಕಾಗೆಲ್ಲ ಶತಕ ಬಾರಿಸಿರುವೆ. ಹೀಗಾಗಿ ಖಂಡಿತ ಚಾನ್ಸ್ ಸಿಕ್ಕರೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದೇನೆ ಎಂದು ಧವನ್ ಹೇಳಿದರು.
4/ 7
2013 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಧವನ್ ಚೊಚ್ಚಲ ಟೆಸ್ಟ್ ಶತಕ ಬಾರಿಸಿದ್ದರು. ಅಲ್ಲದೆ ಟೀಮ್ ಇಂಡಿಯಾ ಪರ 34 ಟೆಸ್ಟ್ ಪಂದ್ಯಗಳನ್ನು ಆಡಿರುವ ಶಿಖರ್, ಏಳು ಶತಕಗಳೊಂದಿಗೆ 2315 ರನ್ಗಳನ್ನು ಕಲೆ ಹಾಕಿದ್ದಾರೆ.
5/ 7
ಆದರೆ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಿದ ಧವನ್ ಸ್ಥಾನವನ್ನು ಬಳಿಕ ಮಯಾಂಕ್ ಅಗರ್ವಾಲ್ ತಮ್ಮದಾಗಿಸಿಕೊಂಡಿದ್ದರು. ಸದ್ಯ ಟೀಮ್ ಇಂಡಿಯಾ ಆರಂಭಿಕ ಜೋಡಿಗಳಾಗಿ ರೋಹಿತ್ ಶರ್ಮಾ-ಮಯಾಂಕ್ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡಿದ್ದಾರೆ.
6/ 7
ಸದ್ಯ IPL ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದು, ಈ ಬಾರಿ ಚಾಂಪಿಯನ್ ಪಟ್ಟ ತಮ್ಮದಾಗಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.