ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಏಕದಿನ ಕ್ರಿಕೆಟ್ನ ಶ್ರೇಯಾಂಕ ಬಿಡುಗಡೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ ಮೊದಲೆರೆಡು ಸ್ಥಾನದಲ್ಲಿ ಮುಂದುವರೆದಿದ್ದಾರೆ.
2/ 13
871 ರೇಟಿಂಗ್ ಪಾಯಿಂಟ್ಗಳೊಂದಿಗೆ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, 855 ಅಂಕಗಳೊಂದಿಗೆ ರೋಹಿತ್ ಎರಡನೇ ಸ್ಥಾನ, 829 ಅಂಕಗಳೊಂದಿಗೆ ಪಾಕಿಸ್ತಾನದ ಬಾಬರ್ ಅಜಂ ಮೂರನೇ ಸ್ಥಾನದಲ್ಲಿದ್ದಾರೆ.
3/ 13
2017ರಿಂದ ಈವರೆಗೆ ಕೊಹ್ಲಿ ತಮ್ಮ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ ಎಂಬುದು ವಿಶೇಷ.
4/ 13
ಬೌಲಿಂಗ್ ವಿಭಾಗದ ಪಟ್ಟಿ ಕೂಡ ಬಿಡುಗಡೆ ಆಗಿದ್ದು, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 2ನೇ ಸ್ಥಾನದಲ್ಲಿದ್ದಾರೆ.
5/ 13
722 ಅಂಕಗಳೊಂದಿಗೆ ನ್ಯೂಜಿಲೆಂಡ್ನ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಅಗ್ರಸ್ಥಾನದಲ್ಲಿದ್ದು, ದ್ವಿತೀಯ ಸ್ಥಾನ ಅಲಂಕರಿಸಿರುವ ಬುಮ್ರಾ 719 ಅಂಕಗಳ ರೇಟಿಂಗ್ಸ್ ಹೊಂದಿದ್ದಾರೆ. ಅಫಘಾನಿಸ್ತಾನದ ಆಫ್ ಸ್ಪಿನ್ನರ್ ಮುಜೀಬ್ ಉರ್ ರೆಹಮಾನ್ (701) ನಂತರದ ಸ್ಥಾನ ಅಲಂಕರಿಸಿದ್ದಾರೆ.
6/ 13
ಆಲ್ರೌಂಡರ್ ವಿಭಾಗದಲ್ಲಿ ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ ಒಬ್ಬರೇ ಕಾಣಿಸಿಕೊಂಡಿದ್ದು, 8ನೇ ಸ್ಥಾನ ಪಡೆದುಕೊಂಡಿದ್ದಾರೆ.
7/ 13
ಉಳಿದಂತೆ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಮೊದಲ ಸ್ಥಾನದಲ್ಲಿದ್ದು, ಇಂಗ್ಲೆಂಡ್ನ ಬೆನ್ ಸ್ಟೋಕ್ಸ್ ಎರಡನೇ ಸ್ಥಾನದಲ್ಲಿದ್ದಾರೆ.
8/ 13
ಐಸಿಸಿ ರ್ಯಾಕಿಂಗ್ನ ಸಂಪೂರ್ಣ ವಿವರ.
9/ 13
ಇನ್ನೂ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪುರುಷರ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್ ಅನ್ನು ಅಧಿಕೃತವಾಗಿ ಆರಂಭಿಸಿದೆ.
10/ 13
ಈ ಲೀಗ್ನ ಪಂದ್ಯಗಳು ಜುಲೈ 30ರಿಂದ ನಡೆಯಲಿರುವ ಇಂಗ್ಲೆಂಡ್ ಮತ್ತು ಐರ್ಲೆಂಡ್ ಏಕದಿನ ಸರಣಿಯೊಂದಿಗೆ ಆರಂಭಗೊಳ್ಳಲಿದೆ.
11/ 13
ಈ ಬಗ್ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧಿಕೃತ ಮಾಹಿತಿ ಹೊರಹಾಕಿದೆ. ಈ ಮೂಲಕ ಭಾರತದಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್ ಕೂಟಕ್ಕೆ ಐಸಿಸಿ ಈಗಲೇ ಸಿದ್ಧತೆ ಶುರು ಮಾಡಿಕೊಂಡಿದೆ.
12/ 13
2023ರಲ್ಲಿ ಭಾರತದಲ್ಲಿ ನಡೆಯಲಿರುವ 50 ಓವರ್ಗಳ ವಿಶ್ವಕಪ್ಗಾಗಿ ತಂಡಗಳನ್ನು ಆರಿಸುವುದಕ್ಕಾಗಿ ಐಸಿಸಿಯು ಈ ಕ್ರಿಕೆಟ್ ವರ್ಲ್ಡ್ ಕಪ್ ಸೂಪರ್ ಲೀಗ್ ಆರಂಭಿಸುತ್ತಿದೆ.
13/ 13
ಇದರಲ್ಲಿ ಅಗ್ರ ಸ್ಥಾನದಲ್ಲಿರುವ 7 ತಂಡಗಳು ಸ್ವಯಂಚಾಲಿತವಾಗಿ ಭಾರತದಲ್ಲಿ ನಡೆಯುವ ಪ್ರತಿಷ್ಠಿತ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಳ್ಳಲಿವೆ.