ICC Test Rankings: ಕೊಹ್ಲಿಯನ್ನು ಹಿಂದಿಕ್ಕಿದ ಸ್ಮಿತ್: ಟಾಪ್ 10ನಲ್ಲಿ ಭಾರತದ 3 ಬ್ಯಾಟ್ಸ್ಮನ್ಗಳು
ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರು ಪಂದ್ಯಗಳಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಅವರ ಪಾಯಿಂಟ್ಗಳು ಇಳಿಕೆಯಾಗಿದ್ದು, ಇದಾಗ್ಯೂ ಮೂರನೇ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ.
2/ 12
ಈ ಬಾರಿ ಕೂಡ ಶ್ರೇಯಾಂಕ ಪಟ್ಟಿಯಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
3/ 12
ಈ ಹಿಂದೆ 2ನೇ ರ್ಯಾಕಿಂಗ್ನಲ್ಲಿದ್ದ ವಿರಾಟ್ ಕೊಹ್ಲಿ 870 ಪಾಯಿಂಟ್ಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಹಾಗೆಯೇ ಮೂರನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಸ್ಮಿತ್ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ.
4/ 12
ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಶತಕ ಹಾಗೂ ಅರ್ಧಶತಕ ಬಾರಿಸಿ ಮಿಂಚಿದ್ದ ಅಂಕಪಟ್ಟಿಯಲ್ಲಿ ಏರಿಕೆ ಕಂಡಿದ್ದು, 900 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ.
5/ 12
4ನೇ ಸ್ಥಾನವನ್ನು ಆಸ್ಟ್ರೇಲಿಯಾ ಆಟಗಾರ ಮಾರ್ನಸ್ ಲಾಬುಶೇನ್ (866 ಪಾಯಿಂಟ್) ಪಡೆದುಕೊಂಡಿದ್ದಾರೆ.
6/ 12
797 ಪಾಯಿಂಟ್ ಪಡೆದಿರುವ ಪಾಕ್ ತಂಡ ನಾಯಕ ಬಾಬರ್ ಆಜಂ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
7/ 12
8ನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಈ ಬಾರಿ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
8/ 12
ಆಸ್ಟ್ರೇಲಿಯಾ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 793 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.
9/ 12
ಕಳೆದ ಬಾರಿ 6ನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಹಂಗಾಮಿ ನಾಯಕ ಅಜಿಂಕ್ಯ ರಹಾನೆ ಈ ಸ್ಥಾನ ಇಳಿಕೆ ಕಂಡು ಈ ಬಾರಿ 7ನೇ ಸ್ಥಾನ ಪಡೆದಿದ್ದಾರೆ.
10/ 12
8ನೇ ಸ್ಥಾನದಲ್ಲಿ 753 ಅಂಕಗಳೊಂದಿಗೆ ಟೀಮ್ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಕಾಣಿಸಿಕೊಂಡಿದ್ದಾರೆ.
11/ 12
ನ್ಯೂಜಿಲೆಂಡ್ನ ಯುವ ಬ್ಯಾಟ್ಸಮನ್ ಹೆನ್ರಿ ನಿಕೋಲಸ್ 9ನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಇದರೊಂದಿಗೆ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡ 2ನೇ ಕಿವೀಸ್ ಆಟಗಾರ ಎನಿಸಿಕೊಂಡಿದ್ದಾರೆ.
12/ 12
ಇನ್ನು ಕಳೆದ ಬಾರಿ 7ನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಆರಂಭಿಕ ಡೇವಿಡ್ ವಾರ್ನರ್ 745 ಪಾಯಿಂಟ್ಗಳೊಂದಿಗೆ ಟಾಪ್ 10 ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದಾರೆ.