ಹಾಗೆಯೇ ಕೆಲ ದಿನಗಳ ಹಿಂದೆ ಬಿಡುಗಡೆಯಾದ ನೂತನ ಟೆಸ್ಟ್ ಬ್ಯಾಟ್ಸ್ಮನ್ ರ್ಯಾಂಕಿಂಗ್ ಪಟ್ಟಿಯಲ್ಲಿ ಕಳೆದ ಬಾರಿ ನಂಬರ್ 1 ಸ್ಥಾನದಲ್ಲಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನ ಕಳೆದುಕೊಂಡಿದ್ದರು. ನ್ಯೂಜಿಲೆಂಡ್ ವಿರುದ್ಧ ವೆಲ್ಲಿಂಗ್ಟನ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಕೇವಲ 21 ರನ್ಗಳನ್ನು ಗಳಿಸಲಷ್ಟೇ ಶಕ್ತರಾಗಿದ್ದರು. ಇದರಿಂದ ಐದು ಅಂಕಗಳ ಕುಸಿತ ಕಂಡಿರುವ ಟೀಂ ಇಂಡಿಯಾ ನಾಯಕ ಸದ್ಯ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.