ಶುಕ್ರವಾರ ಚೆನ್ನೈನಲ್ಲಿ ಶುರುವಾದ ಟೆಸ್ಟ್ನಲ್ಲಿ ಕಣಕ್ಕಿಳಿಯುವ ಮೂಲಕ ಇಂಗ್ಲೆಂಡ್ ಪರ 100 ಟೆಸ್ಟ್ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಗೆ ಜೋ ರೂಟ್ ಸೇರ್ಪಡೆಯಾಗಿದ್ದಾರೆ. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.
2/ 13
ಹೌದು, ಟೆಸ್ಟ್ ಕ್ರಿಕೆಟ್ನಲ್ಲಿ 100ನೇ ಪಂದ್ಯದಲ್ಲಿ ಸೆಂಚುರಿ ಬಾರಿಸಿರುವುದು ಕೆಲವೇ ಕೆಲವು ಆಟಗಾರರು ಮಾತ್ರ. ಇದೀಗ ಟೀಮ್ ಇಂಡಿಯಾ ವಿರುದ್ಧ ಸೆಂಚುರಿ ಬಾರಿಸಿ ಬ್ಯಾಟ್ ಮೇಲೆಕ್ಕೆತ್ತುವ ಮೂಲಕ ಈ ಸಾಧನೆ ಮಾಡಿದ ಇಂಗ್ಲೆಂಡ್ನ 3ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
3/ 13
ಚೆನ್ನೈನ ಚಿದಂಬರಂ ಮೈದಾನದಲ್ಲಿ ಭಾರತದ ಬೌಲರುಗಳನ್ನು ಲೀಲಾಜಾಲವಾಗಿ ದಂಡಿಸಿದ 30 ವರ್ಷದ ಜೋ ರೂಟ್ ತಮ್ಮ 20ನೇ ಶತಕದ ಸಾಧನೆ ಮಾಡಿದರು. ಅಲ್ಲದೆ 98, 99 ಮತ್ತು 100 ನೇ ಟೆಸ್ಟ್ನಲ್ಲಿ ಶತಕ ಬಾರಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದರು.
4/ 13
100ನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಆಟಗಾರರ ಪಟ್ಟಿ ಹೀಗಿದೆ: