ಟೀಮ್ ಇಂಡಿಯಾ ವಿರುದ್ಧದ ಸರಣಿಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ
ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಡಿಸೆಂಬರ್ 17 ರಿಂದ ಆರಂಭವಾಗಲಿದೆ. ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿರುವುದು ವಿಶೇಷ.
News18 Kannada | October 30, 2020, 5:38 PM IST
1/ 9
ಟೀಮ್ ಇಂಡಿಯಾ ವಿರುದ್ಧದ ಪ್ರತಿಷ್ಠಿತ ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಏಕದಿನ ಮತ್ತು ಟಿ20 ಪಂದ್ಯಗಳಿಗೆ ತಂಡವನ್ನು ಆಯ್ಕೆ ಮಾಡಲಾಗಿದ್ದು, ಆರೋನ್ ಫಿಂಚ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನ ಜವಾಬ್ದಾರಿ ಆಲ್ರೌಂಡರ್ ಪ್ಯಾಟ್ ಕಮಿನ್ಸ್ಗೆ ವಹಿಸಲಾಗಿದೆ.
2/ 9
ಇನ್ನು ಒಟ್ಟು 18 ಮಂದಿಯ ಬಳಗದಲ್ಲಿ ಐಪಿಎಲ್ ತಂಡಗಳನ್ನು ಪ್ರತಿನಿಧಿಸುತ್ತಿರುವ 11 ಆಟಗಾರರಿದ್ದು, ಹೀಗಾಗಿ ಒಟ್ಟಾರೆ ಟೂರ್ನಿ ರೋಚಕತೆಯಿಂದ ಕೂಡಿರಲಿದೆ.
3/ 9
ಕೋವಿಡ್ -19 ನಂತರ ಇದು ಭಾರತದ ಮೊದಲ ಅಂತರರಾಷ್ಟ್ರೀಯ ಸರಣಿಯಾಗಿದ್ದು, ಸಂಪೂರ್ಣ ಸುರಕ್ಷತಾ ನಿಯಮದೊಂದಿಗೆ ಉಭಯ ತಂಡಗಳು ಮಹತ್ವದ ಸರಣಿ ಆಡಲಿದೆ. ಒಟ್ಟು 3 ಏಕದಿನ, 3 ಟಿ20 ಮತ್ತು 4 ಟೆಸ್ಟ್ ಪಂದ್ಯಗಳಾಡಲಿದ್ದು, ಟೀಮ್ ಇಂಡಿಯಾ ನವೆಂಬರ್ 12 ಕ್ಕೆ ಸಿಡ್ನಿ ತಲುಪಲಿದೆ.
4/ 9
ನವೆಂಬರ್ 27 ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಉಳಿದೆರಡು ಮ್ಯಾಚ್ಗಳು ನವೆಂಬರ್ 29 ಹಾಗೂ ಡಿಸೆಂಬರ್ 2 ರಂದು ನಡೆಯಲಿದೆ. ಹಾಗೆಯೇ ಮೊದಲ ಟಿ20 ಪಂದ್ಯ ಡಿಸೆಂಬರ್ 4 ರಂದು ನಡೆಯಲಿದ್ದು, ಡಿಸೆಂಬರ್ 6 ಮತ್ತು 8 ರಂದು 2ನೇ ಮತ್ತು 3ನೇ ಟಿ20 ಪಂದ್ಯ ಜರುಗಲಿದೆ.
5/ 9
ಇನ್ನು ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಡಿಸೆಂಬರ್ 17 ರಿಂದ ಆರಂಭವಾಗಲಿದೆ. ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿರುವುದು ವಿಶೇಷ. ಹಾಗೆಯೇ ಎರಡನೇ ಟೆಸ್ಟ್ ಡಿಸೆಂಬರ್ 26 ರಿಂದ 30ರವರೆಗೆ ಮೆಲ್ಬೋರ್ನ್ನಲ್ಲಿ, 3ನೇ ಟೆಸ್ಟ್ ಪಂದ್ಯ ಜನವರಿ 7 ರಿಂದ 11 ರವರೆಗೆ ಸಿಡ್ನಿ ಮೈದಾನದಲ್ಲಿ ಹಾಗೂ ಅಂತಿಮ ಟೆಸ್ಟ್ ಬ್ರಿಸ್ಬೇನ್ನಲ್ಲಿ ಜನವರಿ 15 ರಿಂದ 19 ರವರೆಗೆ ನಡೆಯಲಿದೆ.