ಇನ್ನು ಅಂತಿಮ ಟೆಸ್ಟ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಶುಭ್ಮನ್ ಗಿಲ್ 146 ಎಸೆತಗಳಲ್ಲಿ 91 ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಶತಕ ವಂಚಿತರಾದರು. ಇನ್ನು 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 369 ರನ್ಗಳಿಸಿತ್ತು. ಇದಕ್ಕೆ ಉತ್ತರವಾಗಿ ಟೀಮ್ ಇಂಡಿಯಾ 336 ರನ್ಗಳಿಸಲಷ್ಟೇ ಶಕ್ತರಾಗಿದ್ದರು. 2ನೇ ಇನಿಂಗ್ಸ್ನಲ್ಲಿ ಆಸೀಸ್ ಬ್ಯಾಟ್ಸ್ಮನ್ಗಳನ್ನು ಮೊಹಮ್ಮದ್ ಸಿರಾಜ್ (5 ವಿಕೆಟ್) ಹಾಗೂ ಶಾರ್ದುಲ್ ಠಾಕೂರ್ (4 ವಿಕೆಟ್) 294 ರನ್ಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿತ್ತು.