India vs England 3rd Test: ಟೀಮ್ ಇಂಡಿಯಾದಲ್ಲಿ 2, ಇಂಗ್ಲೆಂಡ್ ತಂಡದಲ್ಲಿ 4 ಬದಲಾವಣೆ..!
ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಿಕೊಳ್ಳಲಾಗಿದ್ದು, 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಹೊರಗುಳಿದಿದ್ದಾರೆ.
ಭಾರತ-ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯಕ್ಕೆ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಮೈದಾನದ ಮೊಟೇರಾ ಸಾಕ್ಷಿಯಾಗಿದೆ. ಹೊನಲು ಬೆಳಕಿನಲ್ಲಿ ನಡೆಯುತ್ತಿರುವ ಈ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
2/ 8
ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಿಕೊಳ್ಳಲಾಗಿದ್ದು, 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಹೊರಗುಳಿದಿದ್ದಾರೆ.
3/ 8
ಅಲ್ಲದೆ ಇವರ ಸ್ಥಾನದಲ್ಲಿ ಜಸ್ಪ್ರೀತ್ ಬುಮ್ರಾ ಹಾಗೂ ವಾಷಿಂಗ್ಟನ್ ಸುಂದರ್ ಅವರು ಆಡುವ ಬಳಗದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಇನ್ನು ಇಂಗ್ಲೆಂಡ್ ತಂಡವು ನಾಲ್ಕು ಬದಲಾವಣೆಯನ್ನು ಮಾಡಿಕೊಂಡಿದೆ.
4/ 8
ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ರೋರಿ ಬರ್ನ್ಸ್, ಲಾರೆನ್ಸ್, ಒಲಿ ಸ್ಟೋನ್ ಮತ್ತು ಮೊಯಿನ್ ಅಲಿ ಬದಲಿಗೆ 3ನೇ ಟೆಸ್ಟ್ ಪಂದ್ಯದಲ್ಲಿ ಜೇಮ್ಸ್ ಅಂಡರ್ಸನ್, ಜೋಫ್ರಾ ಆರ್ಚರ್, ಜಾನಿ ಬೈರ್ಸ್ಟೋ ಮ್ತತು ಜ್ಯಾಕ್ ಕ್ರಾಲಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
5/ 8
ಇನ್ನು ಇಂಗ್ಲೆಂಡ್ ತಂಡಕ್ಕೆ ಟೀಮ್ ಇಂಡಿಯಾ ಬೌಲರುಗಳು ಆರಂಭಿಕ ಆಘಾತ ನೀಡಿದ್ದು, 3ನೇ ಓವರ್ನಲ್ಲೇ ಇಶಾಂತ್ ಶರ್ಮಾ ಸಿಬ್ಲಿ (0) ಅವರನ್ನು ಔಟ್ ಮಾಡಿ ಮೊದಲ ಯಶಸ್ಸು ತಂದುಕೊಟ್ಟರೆ, ಅಕ್ಷರ್ ಪಟೇಲ್ ಜಾನಿ ಬೈರ್ಸ್ಟೋ ಎಲ್ಬಿಡಬ್ಲ್ಯೂ ಬಲೆಗೆ ಕೆಡವಿ 2ನೇ ಯಶಸ್ಸು ತಂದುಕೊಟ್ಟಿದ್ದಾರೆ.
6/ 8
ಸದ್ಯದ ಮಾಹಿತಿ ಪ್ರಕಾರ, ಇಂಗ್ಲೆಂಡ್ ತಂಡವು 21 ಓವರ್ನಲ್ಲಿ 4 ವಿಕೆಟ್ ಕಳೆದುಕೊಂಡು 81 ರನ್ಗಳಿಸಿದೆ. ಸದ್ಯ ಕ್ರೀಸ್ನಲ್ಲಿ ಒಲಿ ಪೋಪ್ (1 ಹಾಗೂ ಬೆನ್ ಸ್ಟೋಕ್ಸ್ (6) ಬ್ಯಾಟ್ ಮಾಡುತ್ತಿದ್ದಾರೆ.