ಪುಣೆಯ ಮಹಾರಾಷ್ಟ್ರ ಕ್ರೀಡಾಂಗಣದಲ್ಲಿ ನಡೆಯುತ್ತುರುವ ಶ್ರೀಲಂಕಾ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಭಾರತ ಪರ ಜಸ್ಪ್ರೀತ್ ಬುಮ್ರಾ ಹೊಸ ದಾಖಲೆ ಬರೆದಿದ್ದಾರೆ.
2/ 13
ತನ್ನ ಮೊದಲ ಓವರ್ನ ಕೊನೆಯ ಎಸೆತದಲ್ಲಿ ಲಂಕಾ ಬ್ಯಾಟ್ಸ್ಮನ್ ಧನುಷ್ಕಾ ಗುಣತಿಲಕ ವಿಕೆಟ್ ಪಡೆಯುವ ಮೂಲಕ ಭಾರತ ಪರ ಟಿ-20 ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
3/ 13
ಸದ್ಯ ಟಿ-20 ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತ ಪರ ಬುಮ್ರಾ 53 ವಿಕೆಟ್ ಕಿತ್ತು ಮೊದಲ ಸ್ಥಾನದಲ್ಲಿದ್ದರೆ, 52 ವಿಕೆಟ್ ಪಡೆದು ಯಜುವೇಂದ್ರ ಚಹಾಲ್ ಹಾಗೂ ಆರ್. ಅಶ್ವಿನ್ 2ನೇ ಸ್ಥಾನ ಹಂಚಿಕೊಂಡಿದ್ದಾರೆ.
4/ 13
ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿ ಕ್ರಮವಾಗಿ ಭುವನೇಶ್ವರ್ ಕುಮಾರ್(41) ಹಾಗೂ ಕುಲ್ದೀಪ್ ಯಾದವ್(39) ಇದ್ದಾರೆ.
5/ 13
ಇಂದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಕೂಡ ಹೊಸ ದಾಖಲೆ ಬರೆದರು. ನಾಯಕನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 11 ಸಾವಿರ ರನ್ಗಳನ್ನು ಗಳಿಸಿದ ಸಾಧನೆ ಮಾಡಿದ್ದಾರೆ.
6/ 13
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ನಾಯಕನಾಗಿ ಹನ್ನೊಂದು ಸಾವಿರ ರನ್ಗಳನ್ನು ಗಳಿಸಿದವರ ಪೈಕಿ 6ನೇ ಹಾಗೂ ಭಾರತದ 2ನೇ ಕ್ಯಾಪ್ಟನ್ ಕೊಹ್ಲಿ ಆಗಿದ್ದಾರೆ. ಎಂಎಸ್ ಧೋನಿ ಈ ಸಾಧನೆ ಮಾಡಿದ ಮೊದಲ ಭಾರತೀಯನಾಗಿದ್ದಾರೆ.
7/ 13
ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಲಸಿತ್ ಮಲಿಂಗಾ ಬೌಲಿಂಗ್ ಆಯ್ಕೆ ಮಾಡಿಕೊಂಡರು.
8/ 13
ಮೊದಲು ಬ್ಯಾಟ್ ಮಾಡಿದ ಭಾರತ ಓಪನರ್ಗಳಾದ ಶಿಖರ್ ಧವನ್ ಹಾಗೂ ಕೆ ಎಲ್ ರಾಹುಲ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು
9/ 13
ಇಂದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಮೂರು ಮಹತ್ವದ ಬದಲಾವಣೆ ಮಾಡಿಕೊಂಡಿದೆ.
10/ 13
ರಿಷಭ್ ಪಂತ್ ಬದಲು ಸಂಜು ಸ್ಯಾಮ್ಸನ್, ಕುಲ್ದೀಪ್ ಯಾದವ್ ಬದಲು ಯಜುವೇಂದ್ರ ಚಹಾಲ್ ಹಾಗೂ ಶಿವಂ ದುಬೆ ಬದಲು ಮನೀಶ್ ಪಾಂಡೆ ಸ್ಥಾನ ಪಡೆದುಕೊಂಡಿದ್ದಾರೆ.
11/ 13
ವಿಶೇಷ ಎಂದರೆ ಸುಮಾರು ಐದು ವರ್ಷಗಳ ಬಳಿಕ ಸಂಜು ಸ್ಯಾಮ್ಸನ್ ಟೀಂ ಇಂಡಿಯಾ ಪರ ಕಣಕ್ಕಿಳಿದರು.
12/ 13
ಈ ಹಿಂದೆ ಭಾರತ ಪರ ಅನೇಕ ಸರಣಿಗೆ ಸ್ಯಾಮ್ಸನ್ ಆಯ್ಕೆ ಆಗಿದ್ದರಾದರೂ ಆಡುವ ಬಳಗದಲ್ಲಿ ಸ್ಥಾನ ಪಡೆಯಲಿಲ್ಲ. ಸದ್ಯ ಪಂತ್ ವೈಫಳ್ಯ ಅನುಭವಿಸುತ್ತಿರುವ ಹಿನ್ನಲೆ ಇವರಿಗೆ ಅವಕಾಶ ಕಲ್ಪಿಸಲಾಯಿತು.
13/ 13
ಅದರಂತೆ ಸಂಜು ಸ್ಯಾಮ್ಸನ್ ತಾನು ಎದುರಿಸಿದ ಮೊದಲ ಎಸೆತದಲ್ಲೇ ಚೆಂಡನ್ನು ಸಿಕ್ಸ್ಗೆ ಅಟ್ಟಿದರು. ಆದರೆ, 2ನೇ ಎಸೆತದಲ್ಲಿ ಎಲ್ಬಿ ಬಲೆಗೆ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರು.