ಈ ವಿಕೆಟ್ನೊಂದಿಗೆ ಇಂಗ್ಲೆಂಡ್ನಲ್ಲಿ ಇಶಾಂತ್ ಶರ್ಮಾ ಒಟ್ಟು 44 ವಿಕೆಟ್ ಪಡೆದಿರುವ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ಪಿಚ್ನಲ್ಲಿ 13 ಪಂದ್ಯಗಳಲ್ಲಿ 20 ಇನ್ನಿಂಗ್ಸ್ ಆಡಿರುವ ಇಶಾಂತ್ ಶರ್ಮಾ ಒಟ್ಟು 44 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದರಲ್ಲಿ ಎರಡು ಬಾರಿ ಐದು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಲೆಜೆಂಡ್ ಕಪಿಲ್ ದೇವ್ ಹೆಸರಿನಲ್ಲಿದ್ದ ದಾಖಲೆಯನ್ನು ಇಶಾಂತ್ ಶರ್ಮಾ ಹಿಂದಿಕ್ಕಿದ್ದರು.
ಇಂಗ್ಲೆಂಡ್ ಪಿಚ್ಗಳಲ್ಲಿ ಕಪಿಲ್ ದೇವ್ 13 ಪಂದ್ಯಗಳ 22 ಇನ್ನಿಂಗ್ಸ್‌ಗಳಲ್ಲಿ 43 ವಿಕೆಟ್ ಪಡೆದಿದ್ದರು. ಈ ವೇಳೆ 2 ಬಾರಿ ಐದು ವಿಕೆಟ್ಗಳ ಸಾಧನೆ ಮಾಡಿದ್ದರು. ಇದೀಗ ಇಂಗ್ಲೆಂಡ್ನಲ್ಲಿ 44 ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾ ಪರ ಇಂಗ್ಲೆಂಡ್ನಲ್ಲಿ ಅತೀ ಹೆಚ್ಚು ವಿಕೆಟ್ ಉರುಳಿಸಿದ ಬೌಲರ್ ಎಂಬ ದಾಖಲೆಯನ್ನು ಇಶಾಂತ್ ಶರ್ಮಾ ನಿರ್ಮಿಸಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಅನಿಲ್ ಕುಂಬ್ಳೆ (36), ಬಿಶನ್ ಸಿಂಗ್ ಬೇಡಿ (35) ನಾಲ್ಕನೇ ಮತ್ತು ಜಹೀರ್ ಖಾನ್ (31) ಐದನೇ ಸ್ಥಾನದಲ್ಲಿದ್ದಾರೆ.