ವಿರಾಟ್ ಕೊಹ್ಲಿ ಹಾಗೂ ಖ್ಯಾತ ನಟಿಯನ್ನು ಬಂಧಿಸುವಂತೆ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ!
ಜೂಜಾಟಕ್ಕೆ ಬಳಸಿದ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದ ಕಾರಣ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೆ ಅರ್ಜಿದಾರರು ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಹುಭಾಷಾ ನಟಿ ತಮನ್ನಾ ಭಾಟಿಯಾ ವಿರುದ್ಧ ಮದ್ರಾಸ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
2/ 10
ಆನ್ಲೈನ್ನಲ್ಲಿ ಜೂಜಾಟವನ್ನು ಉತ್ತೇಜಿಸುತ್ತಿದ್ದಾರೆ ಎಂದು ಕೊಹ್ಲಿ ಹಾಗೂ ನಟಿ ತಮನ್ನಾ ಭಾಟಿಯಾ ಅವರನ್ನು ಬಂಧಿಸಬೇಕೆಂದು ಅರ್ಜಿಯಲ್ಲಿ ಮನವಿಯನ್ನು ಸಲ್ಲಿಸಲಾಗಿದೆ.
3/ 10
ಜೂಜಾಟಕ್ಕೆ ಬಳಸಿದ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದ ಕಾರಣ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೆ ಅರ್ಜಿದಾರರು ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
4/ 10
ಜಾಹೀರಾತಿನ ಮೂಲಕ ಆನ್ಲೈನ್ನಲ್ಲಿ ಗ್ಯಾಂಬ್ಲಿಂಗ್ಗೆ ಪ್ರಚೋದನೆ ನೀಡುತ್ತಿರುವುದಕ್ಕೆ ಇವರನ್ನು ಬಂಧಿಸಬೇಕು…
5/ 10
ಯುವಕರಿಗೆ ಮಾರ್ಗದರ್ಶನ ಹಾಗೂ ತಿಳುವಳಿಕೆ ನೀಡುವಂಥ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವ ಬದಲಿಗೆ ಕೆಟ್ಟ ಹಾದಿ ಹಿಡಿಯಲು ಪ್ರಚೋದಿಸುವ ಜಾಹೀರಾತುಗಳಲ್ಲಿ ಇವರು ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಚೆನ್ನೈ ಮೂಲದ ವಕೀಲರು ಕೋರ್ಟ್ ಮೊರೆ ಹೋಗಿದ್ದಾರೆ.
6/ 10
ವರದಿಗಳ ಪ್ರಕಾರ ಆನ್ಲೈನ್ ಗ್ಯಾಂಬ್ಲಿಂಗ್ ಕಂಪನಿಗಳು ವಿರಾಟ್ ಕೊಹ್ಲಿ ಮತ್ತು ತಮನ್ನಾ ಅವರಂತಹ ತಾರೆಗಳನ್ನು ಯುವ ಜನತೆಯನ್ನು ಬ್ರೈನ್ ವಾಶ್ ಮಾಡಲು ಬಳಸುತ್ತಿವೆ. ಆದ್ದರಿಂದ ಇಬ್ಬರನ್ನೂ ಬಂಧಿಸಬೇಕು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.
7/ 10
ಈ ಪ್ರಕರಣವನ್ನ ಮದ್ರಾಸ್ ಹೈಕೋರ್ಟ್ ಆಗಸ್ಟ್ 4 ರಂದು ಕೈಗೆತ್ತಿಕೊಂಡು ವಿಚಾರಣೆ ನಡೆಸಲಿದೆ.
8/ 10
ಕಳೆದ ಐದು ತಿಂಗಳುಗಳಿಂದ ಕ್ರಿಕೆಟ್ ಮೈದಾನದಿಂದ ದೂರವಿದ್ದ ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಸಜ್ಜಾಗುತ್ತಿದ್ದಾರೆ.
9/ 10
ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನಡೆಯಲಿರುವ ಐಪಿಎಲ್ 2020ಕ್ಕೆ ದಿನಾಂಕ ಕೂಡ ನಿಗದಿಯಾಗಿದ್ದು, ಸೆಪ್ಟೆಂಬರ್ 19ರಂದು ಆರಂಭವಾಗಿ ನವೆಂಬರ್ 8ರಂದು ಮುಕ್ತಾಯಗೊಳ್ಳಲಿದೆ ಎಂದು ಬಿಸಿಸಿಐ ತಿಳಿಸಿದೆ.
10/ 10
ಐಪಿಎಲ್ 2020 ಪಂದ್ಯಾವಳಿಗಳ ವೇಳಾಪಟ್ಟಿಗೆ ಅಂತಿಮ ರೂಪ, ಮತ್ತಿತರ ವ್ಯವಸ್ಥೆಗಾಗಿ ಆಗಸ್ಟ್ 2 ರಂದು ಐಪಿಎಲ್ ಆಡಳಿತಾತ್ಮಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಐಪಿಎಲ್ನ ಎಲ್ಲಾ ಫ್ರಾಂಚೈಸಿಗಳು ಟೂರ್ನಮೆಂಟ್ನ ವಿಧಾನದ ಕುರಿತಾಗಿ ಸ್ಪಷ್ಟ ಚಿತ್ರಣವನ್ನು ದೊರೆಯಲಿದೆ ಎಂದು ತಿಳಿದು ಬಂದಿದೆ.