ಇವರ ಸ್ಥಾನದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಗೆ ಸ್ಥಾನ ಸಿಗಲಿದೆ ಎನ್ನಲಾಗುತ್ತಿದೆ. ರಾಹುಲ್ ಸೀಮಿತ ಓವರ್ ಗಳಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸಿದ್ದರು. ಜೊತೆಗೆ ಟೆಸ್ಟ್ ಕ್ರಿಕೆಟ್ಗೆ ಆಯ್ಕೆಯಾದರು ಕೆಲವು ಸಮಯದಿಂದ ಅವರಿಗೆ ಅವಕಾಶವೇ ಸಿಕ್ಕಿರಲಿಲ್ಲ. ಇತ್ತೀಚೆಗೆ ಇಂಟ್ರಾ ಸ್ಕ್ವಾಡ್ ಅಭ್ಯಾಸ ಪಂದ್ಯದಲ್ಲೂ ರಾಹುಲ್ ಭರ್ಜರಿ ಬ್ಯಾಟಿಂಗ್ ಮಾಡಿದ್ದರು. ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಕನ್ನಡಿಗನಿಗೆ ಅವಕಾಶ ನೀಡಿರಲಿಲ್ಲ.
ಇದೀಗ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ರಾಹುಲ್ಗೆ ತಂಡದಲ್ಲಿ ಚಾನ್ಸ್ ಸಿಗುವುದು ಖಚಿತ ಎನ್ನಲಾಗಿದೆ. 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದ ರಾಹುಲ್ಗೆ ಆ ಬಳಿಕ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ದೊರೆತಿಲ್ಲ. ಅದರಲ್ಲೂ ಆಸ್ಟ್ರೇಲಿಯಾ ಸರಣಿ ವೇಳೆ ಎರಡು ಟೆಸ್ಟ್ ಪಂದ್ಯಗಳ ವೇಳೆ ತಂಡದಲ್ಲಿರೂ ಗಿಲ್ಗೆ ಚಾನ್ಸ್ ನೀಡಲಾಗಿತ್ತು. ಆ ಬಳಿಕ ಅಭ್ಯಾಸದ ವೇಳೆ ಗಾಯಗೊಂಡು ಸರಣಿಯಿಂದ ಹೊರನಡೆದಿದ್ದರು. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಅನುಭವಕ್ಕೆ ಮಣೆಹಾಕಲಿದೆ ಎನ್ನಲಾಗಿತ್ತಾದರೂ, ಶುಭ್ಮನ್ ಗಿಲ್ ಅವರಿಗೆ ಅವಕಾಶ ನೀಡಲಾಗಿತ್ತು.