ಪ್ರಸ್ತುತ ಭಾರತದ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ಇನ್ನೂ ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಇದರಲ್ಲಿ ಎರಡು ಜಯ ಸಾಧಿಸಿದರೆ ಜೋ ರೂಟ್ ಕ್ಲೈವ್ ಲಾಯ್ಡ್ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಹಾಗೆಯೇ ಮೂರೂ ಪಂದ್ಯಗಳಲ್ಲಿ ವಿಜಯ ಸಾಧಿಸಿದರೆ ಏಷ್ಯಾದಲ್ಲಿ ಅತೀ ಹೆಚ್ಚು ಟೆಸ್ಟ್ ಗೆದ್ದ ನಾಯಕರ ಪಟ್ಟಿಯಲ್ಲಿ ಸ್ಮಿತ್ ಅವರೊಂದಿಗೆ ಅಗ್ರಸ್ಥಾನ ಅಲಂಕರಿಸಲಿದ್ದಾರೆ.