ಈ ಬಾರಿಯ ಟೂರ್ನಿ ಆರಂಭಕ್ಕೂ ಮುನ್ನ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಧವನ್ ಐದನೇ ಸ್ಥಾನದಲ್ಲಿದ್ದರು. ಮೊದಲ ಪಂದ್ಯದಲ್ಲೇ 85 ರನ್ ಬಾರಿಸುವ ಮೂಲಕ ಇದೀಗ ಶಿಖರ್ ಧವನ್ 176 ಐಪಿಎಲ್ ಇನ್ನಿಂಗ್ಸ್‌ಗಳಿಂದ ಒಟ್ಟು 5282 ರನ್ ಕಲೆಹಾಕಿದ್ದಾರೆ. ಅಲ್ಲದೆ ಟಾಪ್ ರನ್ ಸರದಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಸುರೇಶ್ ರೈನಾ ಬಳಿಕದ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.