Punit Bisht: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆದ ಪುನೀತ್.!
ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಭಾರತೀಯ ಬ್ಯಾಟ್ಸ್ಮನ್ ಎಂಬ ದಾಖಲೆ ಕೂಡ ಪುನೀತ್ ಬಿಶ್ತ್ ಪಾಲಾಗಿದೆ. 2019 ರಲ್ಲಿ ಶ್ರೇಯಸ್ ಅಯ್ಯರ್ ಸಿಕ್ಕಿಂ ವಿರುದ್ಧ 15 ಸಿಕ್ಸ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 17 ಸಿಕ್ಸರ್ ಬಾರಿಸುವ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.
News18 Kannada | January 13, 2021, 10:09 PM IST
1/ 6
ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಮೇಘಾಲಯ ತಂಡದ ಪುನೀತ್ ಬಿಶ್ತ್ ವಿಶ್ವ ದಾಖಲೆ ಬರೆದ ಸರದಾರ. ಮಿಜೋರಂ ವಿರುದ್ಧ ನಡೆದ ಪಂದ್ಯದಲ್ಲಿ ಪುನೀತ್ ಕೇವಲ 51 ಎಸೆತಗಳಲ್ಲಿ ಅಜೇಯ 146 ರನ್ ಸಿಡಿಸುವ ಮೂಲಕ ದೇಶೀಯ ಟಿ20 ಟೂರ್ನಿಯಲ್ಲಿ ಹೊಸ ದಾಖಲೆ ಬರೆದಿದ್ದಾರೆ.
2/ 6
ಮೇಘಾಲಯ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ನ ಅಬ್ಬರಕ್ಕೆ ಮಿಜೋರಂ ಬೌಲರುಗಳು ನಲುಗಿ ಹೋಗಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಬಿಶ್ತ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್ ಫೋರ್ಗಳ ಸುರಿಮಳೆಗೈದರು. ಪರಿಣಾಮ ಕೇವಲ 23 ಎಸೆತಗಳಿಂದಲೇ 126 ರನ್ ಮೂಡಿಬಂತು. ಅಂದರೆ ಪುನೀತ್ ಬ್ಯಾಟ್ನಿಂದ ಸಿಡಿದದ್ದು 6 ಬೌಂಡರಿ ಹಾಗೂ 17 ಭರ್ಜರಿ ಸಿಕ್ಸರ್ಗಳು. ಅಲ್ಲದೆ ಒಟ್ಟಾರೆ 146 ರನ್ಗಳನ್ನು ಕಲೆಹಾಕಿದರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ವೈಯುಕ್ತಿಕ ಅತೀ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಪುನೀತ್ ಬಿಶ್ತ್ 4ನೇ ಸ್ಥಾನ ಪಡೆದರು.
3/ 6
ಪುನೀತ್ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಮೆಘಾಲಯ ನಿಗದಿತ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 230 ರನ್ಗಳಿಸಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಮಿಜೋರಂ ತಂಡವು 9 ವಿಕೆಟ್ ನಷ್ಟಕ್ಕೆ 100 ರನ್ಗಳಿಸಲು ಮಾತ್ರ ಸಾಧ್ಯವಾಯಿತು. ಇನ್ನು ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್ನ ಹಲವು ದಾಖಲೆಗಳನ್ನು ಪುನೀತ್ ತಮ್ಮ ಹೆಸರಿಗೆ ಬರೆದುಕೊಂಡರು. ಅದರಲ್ಲೂ ಸ್ಪೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಅವರ ದಾಖಲೆಯನ್ನೂ ಸಹ ಸರಿಗಟ್ಟಿದರು.
4/ 6
ಟಿ20 ಕ್ರಿಕೆಟ್ನಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಅತೀ ಹೆಚ್ಚು ರನ್ ಕಲೆಹಾಕಿದ ದಾಖಲೆ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿದ ಕೆಎಲ್ ರಾಹುಲ್ ಅವರದ್ದಾಗಿತ್ತು. ರಾಹುಲ್ ಅಜೇಯ 131 ರನ್ ಗಳಿಸಿರುವುದು ವಿಶ್ವ ದಾಖಲೆಯಾಗಿತ್ತು. ಇದೀಗ ಈ ದಾಖಲೆಯನ್ನು ಪುನೀತ್ 146 ರನ್ಗಳೊಂದಿಗೆ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
5/ 6
ಹಾಗೆಯೇ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆಯನ್ನೂ ಸಹ ಪುನೀತ್ ಸರಿಗಟ್ಟಿದ್ದಾರೆ. 2013 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಕ್ರಿಸ್ ಗೇಲ್ 17 ಸಿಕ್ಸ್ ಬಾರಿಸಿರುವುದು ಇದುವರೆಗಿನ ದಾಖಲೆಯಾಗಿತ್ತು. ಆದರೆ ಮಿಜೋರಂ ವಿರುದ್ಧ 17 ಸಿಕ್ಸರ್ ಸಿಡಿಸುವ ಮೂಲಕ ಗೇಲ್ ದಾಖಲೆಯನ್ನು ಪುನೀತ್ ಸರಿಗಟ್ಟಿದ್ದಾರೆ.
6/ 6
ಇನ್ನು ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಭಾರತೀಯ ಬ್ಯಾಟ್ಸ್ಮನ್ ಎಂಬ ದಾಖಲೆ ಕೂಡ ಪುನೀತ್ ಬಿಶ್ತ್ ಪಾಲಾಗಿದೆ. 2019 ರಲ್ಲಿ ಶ್ರೇಯಸ್ ಅಯ್ಯರ್ ಸಿಕ್ಕಿಂ ವಿರುದ್ಧ 15 ಸಿಕ್ಸ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 17 ಸಿಕ್ಸರ್ ಬಾರಿಸುವ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.