2007 ರ ನಂತರ ಭಾರತ ಈವರೆಗೆ ಟಿ20 ವಿಶ್ವಕಪ್ ಗೆದ್ದಿಲ್ಲ, ಮತ್ತೊಂದೆಡೆ ನಾಯಕ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಭಾರತ ತಂಡ ಈವರೆಗೆ ಯಾವುದೇ ಐಸಿಸಿ ಪ್ರಶಸ್ತಿಯನ್ನು ಗೆದ್ದಿಲ್ಲ. ಹೀಗಾಗಿ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಮಾತನಾಡಿದ್ದು, ಭಾರತದ ಎಲ್ಲಾ ಆಟಗಾರರು ನಾಯಕ ಕೊಹ್ಲಿಗಾಗಿ ಈ ವರ್ಷ ಐಸಿಸಿ ಟ್ರೋಫಿಯನ್ನು ಗೆಲ್ಲಬೇಕು ಎಂದು ಕರೆ ನೀಡಿದ್ದಾರೆ.