ಕ್ಯಾನ್ಬೆರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಂತಿಮ ಮೂರನೇ ಏಕದಿನ ಪಂದ್ಯ ನಡೆಯುತ್ತಿದೆ. ಈಗಾಗಲೇ ಸತತ ಎರಡು ಜಯ ಸಾಧಿಸಿ ಸರಣಿ ವಶಪಡಿಸಿಕೊಂಡಿರುವ ಫಿಂಚ್ ಪಡೆ ವೈಟ್ವಾಷ್ನತ್ತ ಚಿತ್ತ ನೆಟ್ಟಿದ್ದರೆ, ಇತ್ತ ಕೊಹ್ಲಿ ಸೈನ್ಯ ಕೊನೆಯ ಪಂದ್ಯವನ್ನಾದರೂ ಗೆದ್ದು ಟಿ-20 ಸರಣಿಗೂ ಮುನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ.