ಯುಎಇಯಲ್ಲಿ ಟಿ20 ವಿಶ್ವಕಪ್ನಲ್ಲಿ ನಿರತವಾಗಿರುವ ಟೀಮ್ ಇಂಡಿಯಾ ನಾಯಕ ತನ್ನ ಕುಟುಂಬದ ಜೊತೆ ಕಾಲ ಕಳೆದ ಕ್ಷಣಗಳನ್ನ ತೋರಿಸುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಂಡದ ಇತರ ಸದಸ್ಯರ ಜೊತೆ ಬಯೋಬಬಲ್ನಲ್ಲಿರುವ ವಿರಾಟ್ ಕೊಹ್ಲಿ ತನ್ನ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳು ವಾಮಿಕಾ ಜೊತೆ ರೆಸ್ಟೋರೆಂಟ್ವೊಂದರಲ್ಲಿ ಊಟ ಮಾಡುತ್ತಿರುವ ಚಿತ್ರ ಇದಾಗಿದೆ. ವಿರಾಟ್ ಕೊಹ್ಲಿ ಉಳಿದುಕೊಂಡಿರುವ ಹೋಟೆಲ್ನಲ್ಲೇ ಅನುಷ್ಕಾ ಮತ್ತು ವಾಮಿಕಾ ಅವರೂ ಇದ್ದಾರೆ.