ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸುಲಭ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಜೇಂಟ್ಸ್ ವಿರುದ್ಧ 143 ರನ್ಗಳ ಬೃಹತ್ ಜಯ ಸಾಧಿಸಿದ್ದ ಹರ್ಮನ್ ಪ್ರೀತ್ ಕೌರ್ ಬಳಗ ಇಂದು ನಡೆದ ತನ್ನ 2ನೇ ಪಂದ್ಯದಲ್ಲೂ ಆಲ್ರೌಂಡರ್ ಪ್ರದರ್ಶನ ತೋರುವ ಮೂಲಕ ಸತತ 2ನೇ ಜಯ ಸಾಧಿಸಿ ಅಗ್ರಸ್ಥಾನದಲ್ಲಿ ಮುಂದುವರಿದಿದೆ.
156 ರನ್ಗಳ ಸಾಧಾರಣ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಕೇವಲ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಆರಂಭಿಕ ಆಟಗಾರ್ತಿ ಹೇಲಿ ಮ್ಯಾಥ್ಯೂಸ್ 38 ಎಸೆತಗಳಲ್ಲಿ 13 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 77 ರನ್ ಹಾಗೂ ನ್ಯಾಟ್ ಸೀವರ್ ಬ್ರಂಟ್ 29 ಎಸೆತಗಳಲ್ಲಿ 9 ಬೌಂಡರಿ, ಒಂದು ಸಿಕ್ಸರ್ ಸಹಿತ ಅಜೇಯ 55 ರನ್ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಯಸ್ತಿಕಾ ಭಾಟಿಯಾ 23 ರನ್ಗಳಿಸಿದರು.
ಇತ್ತ ಮುಂಬೈ ತಂಡ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಶಿಸ್ತಿನ ಪ್ರದರ್ಶನ ತೋರಿ ಸತತ 2ನೇ ಜಯ ತನ್ನದಾಗಿಸಿಕೊಂಡಿತು. ಮುಂಬೈ ತನ್ನ ಮುಂದಿನ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಸೆಣಸಾಡಲಿದೆ. ಆರ್‌ಸಿಬಿ ಮಾರ್ಚ್ 8ರಂದು ಗುಜರಾತ್ ಜೇಂಟ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಈಗಾಗಲೇ 2 ಪಂದ್ಯಗಳನ್ನು ಸೋಲು ಕಂಡಿರುವುದರಿಂದ ಆರ್ಸಿಬಿಗೆ ಉಳಿದ ಪಂದ್ಯಗಳು ಮಾಡುವ ಇಲ್ಲವೆ ಮಡಿ ಪಂದ್ಯವಾಗಲಿದೆ.