2003ರಲ್ಲಿ ಪೋರ್ಚುಗಲ್ ತಂಡ ಸೇರ್ಪಡೆ: 2003ರಲ್ಲಿ ಕ್ರಿಸ್ಟಿಯಾನೋ ರೊನಾಲ್ಡೊ ಪೋರ್ಚುಗಲ್ ಪರ ತನ್ನ ಮೊದಲ ಅಂತರಾಷ್ಟ್ರೀಯ ಫುಟ್ಬಾಲ್ ಪಂದ್ಯವನ್ನಾಡಿದ್ರು. ಇದಾದ ಕೆಲವೇ ವರ್ಷಗಳಲ್ಲಿ ಅಂದರೆ 2008ರಲ್ಲಿ ಪೋರ್ಚುಗಲ್ ಫುಟ್ಬಾಲ್ ತಂಡದ ನಾಯಕನಾದ ರೋನಾಲ್ಡೋ ಅವರು 2016 UEFA ಯುರೋಪಿಯನ್ ಚಾಂಪಿಯನ್ಶಿಪ್ ಮತ್ತು 2019 UEFA ನ್ಯಾಷನಲ್ ಲೀಗ್ ನಲ್ಲಿ ಪೋರ್ಚುಗಲ್ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು.
ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಫಾಲೋವರ್ಸ್: ಪುಟ್ಬಾಲ್ ಮೈದಾನದ ಹೊರತುಪಡಿಸಿ ರೋನಾಲ್ಡೋ ಅವರಿಗೆ ವಿಶ್ವದಾದ್ಯಂತ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಇದ್ದಾರೆ.. ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವವರ ಪೈಕಿ ರೊನಾಲ್ಡೊ ಅಗ್ರಸ್ಥಾನದಲ್ಲಿದ್ದಾರೆ. 399 ಮಿಲಿಯನ್ ಜನರು ರೋನಾಲ್ಡೋ ಅವರನ್ನು ಇನ್ಸ್ಟಾಗ್ರಾಂ ನಲ್ಲಿ ಫಾಲೋ ಮಾಡುತ್ತಿದ್ದಾರೆ.
ಅತಿ ಹೆಚ್ಚು ಗೋಲು ಗಳಿಸಿರುವ ಫುಟ್ಬಾಲ್ ಆಟಗಾರ: ಫುಟ್ಬಾಲ್ ದಂತಕತೆಯಾಗಿರುವ ಕ್ರಿಸ್ಟಿಯಾನೋ ರೊನಾಲ್ಡೊ ಫುಟ್ಬಾಲ್ ಇತಿಹಾಸದಲ್ಲೇ ಅತಿ ಹೆಚ್ಚು ಗೋಲು ಕಳಿಸಿರುವ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇದುವರೆಗೂ 1,100ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿರುವ ರೊನಾಲ್ಡೊ ಇತಿಹಾಸದಲ್ಲಿ ಇದುವರೆಗೂ 803 ಗೋಲುಗಳನ್ನು ಗಳಿಸಿ ಫುಟ್ಬಾಲ್ನಲ್ಲಿ ಹೆಚ್ಚು ಗೋಲು ಗಳಿಸಿರುವ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.