ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ. ಈ ಪಂದ್ಯದಲ್ಲಿ ತಂಡ 50 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಎಡಗೈ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಸರಣಿಯ ಎರಡೂ ಪಂದ್ಯಗಳಲ್ಲಿ ಹೊಸ ಚೆಂಡಿನೊಂದಿಗೆ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಸಾಕಷ್ಟು ತೊಂದರೆ ನೀಡಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲೂ ಒಟ್ಟು 5 ವಿಕೆಟ್ ಕಬಳಿಸಿದರು.