ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ನ್ಯೂಜಿಲ್ಯಾಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ. ಬೇ ಓವಲ್ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ 2 ಸಿಕ್ಸರ್ ಸಿಡಿಸುವ ಮೂಲಕ ದೀರ್ಘ ಮಾದರಿಯಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟರ್ ಎಂಬ ವಿಶ್ವದಾಖಲೆ ಬರೆದಿದ್ದಾರೆ.
ಇನ್ನು ಪಂದ್ಯಕ್ಕೆ ಬರುವುದಾದರೆ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಇಂಗ್ಲೆಂಡ್ ಮೊದಲ ಇನಿಂಗ್ಸ್ನಲ್ಲಿ 325/9ಕ್ಕೆ ಡಿಕ್ಲೇರ್ ಮಾಡಿಕೊಂಡಿತು. ಇದಕ್ಕುತ್ತರವಾಗಿ ಅತಿಥೇಯ ನ್ಯೂಜಿಲೆಂಡ್ ತಂಡವು 306 ರನ್ಗಳಿಗೆ ಆಲೌಟ್ ಆಗಿತ್ತು. 19 ರನ್ಗಳ ಅಲ್ಪ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ 374 ರನ್ಗಳಿಸಿ ಕಿವೀಸ್ ತಂಡಕ್ಕೆ 384 ರನ್ಗಳ ಬೃಹತ್ ಗುರಿ ನೀಡಿತ್ತು.