ಇದೇ ವಿಷಯಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ಗಂಭೀರ್, ದೇಶ ನನಗಾಗಿ ಏನು ಮಾಡಿದೆ ಎಂದು ಎಲ್ಲರೂ ಪ್ರಶ್ನೆ ಮಾಡುತ್ತಾರೆ. ಆದರೆ, ನಾನು ದೇಶಕ್ಕಾಗಿ ಏನು ಮಾಡಿದ್ದೇನೆ ಎಂಬುದು ಮುಖ್ಯ. ಕೊರೋನಾ ಸೋಂಕು ನಿವಾರಣೆ ನಿಟ್ಟಿನಲ್ಲಿ ತಮ್ಮ ಎರಡು ವರ್ಷದ ವೇತನವನ್ನು ಪ್ರಧಾನ ಮಂತ್ರಿ ಕೇರ್ಸ್ ನಿಧಿಗೆ ನೀಡುವುದಾಗಿ ಅವರು ತಿಳಿಸಿದ್ದಾರೆ. ನೀವೂ ಕೂಡ ಮುಂದೆ ಬನ್ನಿ ಎಂದು ಬರೆದುಕೊಂಡಿದ್ದರು.