ICC ODI Rankings: ಐಸಿಸಿ ನೂತನ ಏಕದಿನ ರ್ಯಾಂಕಿಂಗ್ ಪ್ರಕಟ, ರೋಹಿತ್-ಕೊಹ್ಲಿಗೆ ಬಿಗ್ ಶಾಕ್!
ICC ODI Rankings: ಟಿ20 ವಿಶ್ವಕಪ್ ನಂತರ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಈ ವರ್ಷ ಹಲವು ಏಕದಿನ ಪಂದ್ಯಗಳನ್ನು ಆಡಿಲ್ಲ. ಇದು ಇಬ್ಬರ ಏಕದಿನ ರ್ಯಾಂಕಿಂಗ್ ಮೇಲೆ ಪರಿಣಾಮ ಬೀರಿದೆ.
ಟಿ20 ವಿಶ್ವಕಪ್ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿರುವುದು ಗೊತ್ತೇ ಇದೆ. ಹೀಗಾಗಿ ಅವರು ನ್ಯೂಜಿಲೆಂಡ್ ಪ್ರವಾಸದಿಂದ ದೂರ ಉಳಿದಿದ್ದರು.
2/ 8
ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಈ ವರ್ಷ ಹಲವು ಏಕದಿನ ಪಂದ್ಯಗಳನ್ನು ಆಡಿರಲಿಲ್ಲ. ಇದು ಇಬ್ಬರ ಏಕದಿನ ರ್ಯಾಂಕಿಂಗ್ ಮೇಲೆ ಪರಿಣಾಮ ಬೀರಿದೆ.
3/ 8
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಇತ್ತೀಚಿನ ಐಸಿಸಿ ಪುರುಷರ ಬ್ಯಾಟರ್ಸ್ ಶ್ರೇಯಾಂಕದಲ್ಲಿ ಒಂದು ಸ್ಥಾನವನ್ನು ಕಳೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ 707 ರೇಟಿಂಗ್ ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದ್ದಾರೆ.
4/ 8
ರೋಹಿತ್ ಶರ್ಮಾ 704 ರೇಟಿಂಗ್ ಪಾಯಿಂಟ್ಗಳೊಂದಿಗೆ 9ನೇ ಸ್ಥಾನದಲ್ಲಿದ್ದಾರೆ. ಭಾರತ ಈ ವರ್ಷ ಮತ್ತೊಂದು ಏಕದಿನ ಸರಣಿಯನ್ನು ಆಡಲಿದೆ. ಡಿಸೆಂಬರ್ 4 ರಿಂದ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ.
5/ 8
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೂರು ಪಂದ್ಯಗಳ ಈ ಸರಣಿಯಲ್ಲಿ ಮಿಂಚಿದರೆ, ಅವರ ಶ್ರೇಯಾಂಕವು ಸುಧಾರಿಸುವ ಸಾಧ್ಯತೆಯಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಶ್ರೇಯಸ್ ಅಯ್ಯರ್ 27ನೇ ಸ್ಥಾನಕ್ಕೆ ಏರಿದ್ದಾರೆ.
6/ 8
ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಕಿವೀಸ್ ಬ್ಯಾಟ್ಸ್ಮನ್ ಟಾಮ್ ಲ್ಯಾಥಮ್ ತಮ್ಮ ಶ್ರೇಯಾಂಕವನ್ನು ಗಮನಾರ್ಹವಾಗಿ ಸುಧಾರಿಸಿದ್ದಾರೆ. ಅವರು 10 ಸ್ಥಾನ ಮೇಲೇರಿ 18ನೇ ರ್ಯಾಂಕ್ ಗಳಿಸಿದ್ದಾರೆ.
7/ 8
ಈ ಪಂದ್ಯದಲ್ಲಿ 98 ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ 10ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯವೂ ಮಳೆಯಿಂದಾಗಿ ರದ್ದಾಗಿತ್ತು.
8/ 8
ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕಿವೀಸ್ 1-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಭಾರತ ಟಿ20 ಸರಣಿ ಗೆದ್ದರೂ ಶಿಖರ್ ಧವನ್ ನಾಯಕತ್ವದಲ್ಲಿ ಏಕದಿನ ಸರಣಿ ಗೆಲ್ಲಲು ಸಾಧ್ಯವಾಗಲಿಲ್ಲ.