ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಪಡೆದಕೊಂಡಿದ್ದಾರೆ. ಅವರು ಶ್ರೀಲಂಕಾ ಮತ್ತು ನ್ಯೂಜಿಲ್ಯಾಂಡ್ ವಿರುದ್ಧ ಸರಣಿಯನ್ನು ಕ್ಲೀನ್ ಸ್ವೀಪ್ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಸಿರಾಜ್ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ 3 ಪಂದ್ಯಗಳಿಂದ 9 ವಿಕೆಟ್, ನ್ಯೂಜಿಲ್ಯಾಂಡ್ ವಿರುದ್ಧ 5 ವಿಕೆಟ್ ಪಡೆದಿದ್ದರು. ಈ ಪ್ರದರ್ಶನ ಅವರನ್ನು ಅಗ್ರಸ್ಥಾನಕ್ಕೇರಿಸಿದೆ.
ತಂಡಗಳ ವಿಭಾಗದಲ್ಲಿ ಭಾರತ ತಂಡ ಟಿ20 ಮತ್ತು ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಟಿ20ಯಲ್ಲಿ 267 ರೇಟಿಂಗ್ ಅಂಕ ಏಕದಿನದಲ್ಲಿ 114 ರೇಟಿಂಗ್ ಅಂಕದೊಂದಿಗೆ ಅಗ್ರಸ್ಥಾನ8 ಕಾಪಾಡಿಕೊಂಡಿದೆ. ಟೆಸ್ಟ್ನಲ್ಲಿ ರೋಹಿತ್ ಪಡೆ 2ನೇ ಸ್ಥಾನ ಪಡೆದುಕೊಂಡಿದೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆದ್ದರೆ ಮೂರು ಮಾದರಿಯಲ್ಲೂ ಅಗ್ರಸ್ಥಾನಕ್ಕೇರಿದ ಗೌರವಕ್ಕೆ ಪಾತ್ರವಾಗಲಿದೆ.