742 ರೇಟಿಂಗ್ ಪಾಯಿಂಟ್‌ಗಳೊಂದಿಗೆ ವಿರಾಟ್ ಕೊಹ್ಲಿ ಮತ್ತು 738 ರೇಟಿಂಗ್ ಪಾಯಿಂಟ್‌ಗಳೊಂದಿಗೆ ರಿಷಬ್ ಪಂತ್ ಕ್ರಮವಾಗಿ ಒಂಬತ್ತು ಮತ್ತು ಹತ್ತನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡದ ನಾಯಕ ಬಾಬಿರ್ ಅಜಮ್ ಮೂರು ಸ್ಥಾನ ಮೇಲೇರಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ಇದೇ ಸರಣಿಯಲ್ಲಿ ಮಿಂಚಿದ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಉಸ್ಮಾನ್ ಖವಾಜಾ ಜೊತೆಗೆ ಪಾಕಿಸ್ತಾನದ ಬ್ಯಾಟ್ಸ್ ಮನ್ ಮೊಹಮ್ಮದ್ ರಿಜ್ವಾನ್ ಕೂಡ ತಮ್ಮ ಸ್ಥಾನವನ್ನು ಸುಧಾರಿಸಿಕೊಂಡರು.