ಆಸ್ಟ್ರೇಲಿಯನ್ ತಂಡ: ಸ್ಟೀವನ್ ಸ್ಮಿತ್ ಆಸೀಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮೂರನೇ ಏಕದಿನ ಪಂದ್ಯದ ಅಂತಿಮ ತಂಡದಲ್ಲಿ ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಅಲೆಕ್ಸ್ ಕ್ಯಾರಿ(ಡಬ್ಲ್ಯೂ), ಕ್ಯಾಮರೂನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್/ನಾಥನ್ ಎಲ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ ಆಡುವ ಸಾಧ್ಯತೆ ಇದೆ.
ನಿರ್ಣಾಯಕ ಮೂರನೇ ಏಕದಿನ ಪಂದ್ಯಕ್ಕೆ ಆಸೀಸ್ ತಂಡದಲ್ಲಿ ಒಂದು ಬದಲಾವಣೆಯಾಗುವ ಸಾಧ್ಯತೆ ಇದೆ. ನಾಥನ್ ಎಲ್ಲಿಸ್ ಬದಲಿಗೆ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಚೆನ್ನೈ ಪಿಚ್ ಸ್ಪಿನ್ ಗೆ ಹೊಂದಿಕೊಳ್ಳುವ ಅವಕಾಶವಿರುವುದರಿಂದ ಮ್ಯಾಕ್ಸ್‌ವೆಲ್ ಅವರನ್ನು ಅಂತಿಮ ತಂಡಕ್ಕೆ ಸೇರಿಸಿಕೊಂಡರೆ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಷಯದಲ್ಲಿ ತಂಡ ಬಲಿಷ್ಠವಾಗಲಿದೆ.
ಟೀಂ ಇಂಡಿಯಾ: ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಬಲಿಷ್ಠವಾಗಿ ಕಾಣುತ್ತಿದೆ. ನಾಳೆಯ ಅಂತಿಮ ತಂಡದಲ್ಲಿ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್/ಇಶಾನ್ ಕಿಶನ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್/ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಸೇರಿದ್ದಾರೆ.
ಸೂರ್ಯ ಬದಲಿಗೆ ಇಶಾನ್ಗೆ ಅವಕಾಶ?: ಮಿಸ್ಟರ್ 360 ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಟಿ20ಯಲ್ಲಿ ತಮ್ಮ ಸಾಮರ್ಥ್ಯ ತೋರಿದರೂ ಏಕದಿನದಲ್ಲಿ ಪ್ರಭಾವಿಯಾಗಿಲ್ಲ. ಸೂರ್ಯ ಟಿ20ಯಲ್ಲಿ ನಂ.1 ಬ್ಯಾಟ್ಸ್‌ಮನ್. ಆಸೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ದಯನೀಯವಾಗಿ ವಿಫಲರಾಗಿದ್ದಾರೆ. ಕಳೆದ ಎರಡು ಏಕದಿನ ಪಂದ್ಯಗಳಲ್ಲಿ ಅವರು ಡಕ್ ಆಗಿದ್ದರಿಂದ ಮೂರನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.
ಮೂರನೇ ಏಕದಿನ ಪಂದ್ಯವು ಶ್ರೇಯಾಂಕದ ದೃಷ್ಟಿಯಿಂದ ಉಭಯ ತಂಡಗಳಿಗೆ ನಿರ್ಣಾಯಕವಾಗಲಿದೆ. ಸದ್ಯ ಐಸಿಸಿ ಏಕದಿನ ತಂಡ ರ‍್ಯಾಂಕಿಂಗ್ ನಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಅಗ್ರಸ್ಥಾನ ಕಾಯ್ದುಕೊಳ್ಳಬೇಕಾದರೆ ಭಾರತ ಈ ಪಂದ್ಯವನ್ನು ಗೆಲ್ಲಲೇಬೇಕು. ಆಸೀಸ್ ಗೆದ್ದರೆ, ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಳ್ಳುತ್ತದೆ ಮತ್ತು ಏಕದಿನ ತಂಡ ರ‍್ಯಾಂಕಿಂಗ್‌ನಲ್ಲಿ ನಂಬರ್ ಒನ್ ಸ್ಥಾನಕ್ಕೇರಲಿದೆ.