ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಭಾರತ ತಂಡ ಪಂದ್ಯದ ಆರಂಭದಿಂದಲೂ ಆಸೀಸ್ ಬ್ಯಾಟರ್ಗಳ ಮೇಲೆ ನಿಯಂತ್ರಣ ಸಾಧಿಸಿತು. ಭಾರತದ ಪರ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ತಲಾ 3 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ರವೀಂದ್ರ ಜಡೇಜಾ 2 ವಿಕೆಟ್ ಪಡೆದರು. ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಕುಲ್ದೀಪ್ ಯಾದವ್ ತಲಾ 1 ವಿಕೆಟ್ ಪಡೆದು ಆಸ್ಟ್ರೇಲಿಯಾ ಪತನಕ್ಕೆ ಕಾರಣರಾದರು.