ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿ ಮತ್ತೆ ಮರಳುತ್ತಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ತಂಡಕ್ಕೆ ಪ್ರಮುಖ ಪಾತ್ರ ವಹಿಸಿದ್ದ ಈ ಬಿರುಸಿನ ಆಲ್ ರೌಂಡರ್ ಆಸ್ಟ್ರೇಲಿಯಾ ಏಕದಿನ ಸರಣಿಗಾಗಿ ಕಾಯುತ್ತಿದ್ದಾರೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಶಾರ್ದೂಲ್ ಅವರಿಗೆ ಈ ಸರಣಿ ಅತ್ತಯಂತ ಮುಖ್ಯವಾಗಿದೆ.