ಇತ್ತೀಚೆಗೆ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದರು. ಇದರ ಪರಿಣಾಮವಾಗಿ, ಆಸೀಸ್ ವಿರುದ್ಧದ ಏಕದಿನ ಸರಣಿಯಿಂದ ಹೊರನಡೆದಿದ್ದಾರೆ. ಸೂರ್ಯಕುಮಾರ್ ಯಾದವ್ ಅವರಿಗೆ ಇದೊಂದು ಉತ್ತಮ ಅವಕಾಶದಂತೆ ಕಾಣುತ್ತಿದೆ. ಈ ಏಕದಿನ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರ ಪ್ರದರ್ಶನವು ಏಕದಿನ ವಿಶ್ವಕಪ್ ತಂಡದಲ್ಲಿ ಅವರ ಸ್ಥಾನವನ್ನು ಅವಲಂಬಿಸಿರುತ್ತದೆ.
ಏಕದಿನ ವಿಶ್ವಕಪ್ ನಲ್ಲಿ ಸ್ಥಾನ ಪಡೆಯಲು ಜಡ್ಡು ಆಸೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಬೇಕಿದೆ. ಗಾಯದಿಂದ ಚೇತರಿಸಿಕೊಂಡಿರುವ ಜಡೇಜಾ ಇತ್ತೀಚೆಗೆ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಬೌಲಿಂಗ್ ಜೊತೆಗೆ ನಿರ್ಣಾಯಕ ಸಮಯದಲ್ಲಿ ಬ್ಯಾಟ್ ಮೂಲಕ ಉತ್ತಮ ಪ್ರದರ್ಶನ ನೀಡಿದ್ದರು. ಅದೇ ಪ್ರದರ್ಶನ ಮುಂದುವರೆಸದಿದ್ದರೆ ವಿಶ್ವಕಪ್ ತಂಡದಲ್ಲಿ ಸ್ಥಾನ ಕಷ್ಟಕರವಾಗಲಿದೆ.